HEALTH TIPS

Goa Nightclub Fire: ನ್ಯಾಯಾಂಗ ತನಿಖೆಗೆ ಆದೇಶ; ಮಾಲೀಕನ ವಿರುದ್ಧ ಎಫ್‌ಐಆರ್

 ಪಣಜಿ: ಗೋವಾದ ನೈಟ್ ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆದೇಶಿಸಿದ್ದಾರೆ.

ಅಲ್ಲದೆ ಬಿರ್ಚ್ ಬೈ ರೊಮಿಯೊ ಲೇನ್ ನೈಟ್ ಕ್ಲಬ್ ಮಾಲೀಕ ಹಾಗೂ ಪ್ರಧಾನ ವ್ಯವಸ್ಥಾಪಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.


ಬಿರ್ಚ್ ಬೈ ರೊಮಿಯೊ ಲೇನ್ ನೈಟ್ ಕ್ಲಬ್

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವುಉoಚಿ ಓighಣಛಿಟub ಖಿಡಿಚಿgeಜಥಿ: ಡ್ಯಾನ್ಸ್ ಫ್ಲೋರ್‌ನಲ್ಲಿ ಕನಿಷ್ಠ 100 ಮಂದಿ ಇದ್ದರು!

ಉತ್ತರ ಗೋವಾದ ನೈಟ್ ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 25 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.

'ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲಾಗುತ್ತಿದೆ. ದುರಂತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ' ಎಂದು ಸಿಎಂ ಸಾವಂತ್ ತಿಳಿಸಿದ್ದಾರೆ.

'ಗೋವಾದಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲು. ಕ್ಲಬ್‌ನ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಜನದಟ್ಟಣೆ ಹಾಗೂ ಕಿರಿದಾದ ಪ್ರದೇಶದಿಂದಾಗಿ ಜನರಿಗೆ ಹೊರಗೆ ಹೋಗಲು ಸಾಧ್ಯವಾಗಲಿಲ್ಲ' ಎಂದು ಅವರು ತಿಳಿಸಿದ್ದಾರೆ.

'ನೈಟ್ ಕ್ಲಬ್‌ನಲ್ಲಿ ಅಗ್ನಿ ಸುರಕ್ಷತಾ ಮಾನದಂಡಗಳನ್ನು ಪಾಲಿಸಲಾಗಿಲ್ಲ. ದುರಂತದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತ್ತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು' ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ...

ಗೋವಾ ನೈಟ್ ಕ್ಲಬ್ ಬೆಂಕಿ ಅವಘಡಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಳಿಗೆ ತಲಾ ₹2 ಲಕ್ಷ ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್‌) ಪರಿಹಾರ ಬಿಡುಗಡೆ ಮಾಡಲಾಗಿದ್ದು, ಗಾಯಾಳುಗಳಿಗೆ ತಲಾ ₹50,000 ನೀಡಲಾಗುವುದು ಎಂದು ಹೇಳಿದೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries