HEALTH TIPS

ಜಮ್ಮು-ಕಾಶ್ಮೀರದ ಸಾಂಬಾದಲ್ಲಿ ಗುಂಡಿನ ದಾಳಿ: ಸೇನಾ JCO ಹುತಾತ್ಮ

ಜಮ್ಮು: ಜಮ್ಮು- ಕಾಶ್ಮೀರದ ಸಾಂಬಾ ಜಿಲ್ಲೆಯ ಸೇನಾ ಶಿಬಿರದೊಳಗೆ ನಡೆದ ಗುಂಡಿನ ದಾಳಿಯಲ್ಲಿ ಸೇನೆಯ ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಒಬ್ಬರು ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ವಕ್ತಾರರು ಬುಧವಾರ ತಿಳಿಸಿದ್ದಾರೆ.

ಈ ಘಟನೆ ನಿನ್ನೆ ತಡರಾತ್ರಿ ನಡೆದಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಗುಂಡಿನ ದಾಳಿಯ ಹಿಂದೆ ಯಾವುದೇ ಭಯೋತ್ಪಾದಕ ಕೃತ್ಯದ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ.

ಸಾಂಬಾದಲ್ಲಿರುವ ಸೇನಾ ಘಟಕದ ಜೆಸಿಒ ಒಬ್ಬರು ಜಮ್ಮುವಿನಲ್ಲಿ ಕರ್ತವ್ಯದಲ್ಲಿದ್ದಾಗ ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ. ಈ ಹಂತದಲ್ಲಿ, ಭಯೋತ್ಪಾದಕ ಕೃತ್ಯದ ಶಂಕೆಯನ್ನು ತಳ್ಳಿಹಾಕಿದ್ದೇವೆ ಎಂದರು.

ಘಟನೆ ತನಿಖೆ ಹಂತದಲ್ಲಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries