ಕಾಸರಗೊಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ಕಾಸರಗೋಡು ಪೆರಿಯ ಕ್ಯಾಂಪಸ್‍ನಲ್ಲಿ ವಿದ್ಯಾರ್ಥಿಗಳಿಗೆ ಜ್ಞಾನ ಮತ್ತು ಉತ್ಸಾಹವನ್ನು ನೀಡಲು 'ತಂತ್ರ 2026'ಶೈಕ್ಷಣಿಕ ಉತ್ಸವ ಆಯೋಜಿಸಲಾಯಿತು. ಅರ್ಥಶಾಸ್ತ್ರ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿವಿಧ ಜಿಲ್ಲೆಗಳ 14 ಕಾಲೇಜುಗಳ ವಿದ್ಯಾರ್ಥಿಗಳು ¨ಶೈಕ್ಷಣಿಕ ಉತ್ಸವದಲ್ಲಿ ಪಾಲ್ಗೊಂಡಿದ್ದರು.
ಅರ್ಥಶಾಸ್ತ್ರ ಮತ್ತು ಸಂಬಂಧಿತ ವಿಷಯಗಳ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಉಪಕುಲಪತಿ ಪೆÇ್ರ. ಸಿದ್ದು ಪಿ. ಅಲಗೂರ್ ಸಮಾರಂಭ ಉದ್ಘಾಟಿಸಿ ಮಾತನಾಡಿ, ಬದಲಾಗುತ್ತಿರುವ ಕಾಲಕ್ಕೆ ಅನುಗುಣವಾಗಿ ಜ್ಞಾನವನ್ನು ಪಡೆಯಲು 'ತಂತ್ರ 2026' ರಂತಹ ಕಾರ್ಯಕ್ರಮಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನನ ಮಾಡಿದರು. ವಿಭಾಗದ ಮುಖ್ಯಸ್ಥ ಡಾ. ಪಿ. ಅಬ್ದುಲ್ ಕರೀಮ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಡೀನ್ ಅಕಾಡೆಮಿಕ್ ಪೆÇ್ರ.ಜೋಸೆಫ್ ಕೊಯಿಪಲ್ಲಿ, ಡಾ. ಶ್ಯಾಮ್ ಪ್ರಸಾದ್, ಡಾ. ಟಿ.ಜೆ. ಜೋಸೆಫ್ ಉಪಸ್ಥಿತರಿದ್ದರು. ಸಮಾರೋಪ ಸಮಾರಂಭದಲ್ಲಿ ಪ್ರಭಾರಿ ಕುಲಸಚಿವ ಪೆÇ್ರ. ವಿ.ಬಿ. ಸಮೀರ್‍ಕುಮಾರ್ ಬಹುಮಾನ ವಿತರಿಸಿದರು. ಡೀನ್ ಪೆÇ್ರ. ರಾಜೇಂದ್ರ ಪಿಲಾಂಗಟ್ಟೆ, ಡಾ. ವಿ. ನಾಗರಾಜ್ ಮತ್ತು ಡಾ. ಸಿ. ಅನ್ವರ್ ಸಾದತ್ ಉಪಸ್ಥಿತರಿದ್ದರು.

