HEALTH TIPS

27ರಂದು ರಾಷ್ಟ್ರವ್ಯಾಪಿ ಬ್ಯಾಂಕ್‌ ಮುಷ್ಕರ: ನೌಕರರ ಒಕ್ಕೂಟದಿಂದ ಪ್ರತಿಭಟನೆಗೆ ಕರೆ

ನವದೆಹಲಿ: ವಾರಕ್ಕೆ ಐದು ದಿನಗಳ ಕಾಲ ಕೆಲಸದ ನೀತಿ ಜಾರಿಗೊಳಿಸಬೇಕೆಂಬ ದೀರ್ಘಕಾಲದ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್‌ ನೌಕರರ ಒಕ್ಕೂಟವು (ಯುಎಫ್‌ಬಿಯು) ಇದೇ ಜನವರಿ 27ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಒಂದೊಮ್ಮೆ ಪ್ರತಿಭಟನೆ ನಡೆದರೆ, ಸತತ ಮೂರು ದಿನಗಳ ಕಾಲ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್‌ಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಜನವರಿ 25 (ಭಾನುವಾರ), 26 ಗಣರಾಜ್ಯ ದಿನವಿದೆ. ಒಂದೊಮ್ಮೆ ಪ್ರತಿಭಟನೆ ನಡೆದರೆ, ಬ್ಯಾಂಕಿಂಗ್‌ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬ್ಯಾಂಕ್‌ ಸಿಬ್ಬಂದಿಯು ಗ್ರಾಹಕರಿಗೆ ಈಗಾಗಲೇ ಮಾಹಿತಿ ನೀಡಿದ್ದಾರೆ.

'ಪ್ರತಿಭಟನೆಯ ನೋಟಿಸ್‌ ನೀಡಿದ ಬೆನ್ನಲ್ಲೇ, ಕಾರ್ಮಿಕ ಇಲಾಖೆಯ ಮುಖ್ಯ ಆಯುಕ್ತರು ಬುಧವಾರ ಹಾಗೂ ಗುರುವಾರ ರಾಜಿ ಪ್ರಕ್ರಿಯೆ ಸಭೆ ನಡೆಸಿದ್ದಾರೆ. ಆದರೆ ಧನಾತ್ಮಕವಾದ ಫಲಿತಾಂಶ ಹೊರಬಂದಿಲ್ಲ' ಎಂದು ಬ್ಯಾಂಕ್‌ ಅಧಿಕಾರಿಗಳು ಹಾಗೂ ಕಾರ್ಮಿಕರ 9 ಸಂಘಟನೆಗಳ ಒಕ್ಕೂಟವಾದ ಯುಎಫ್‌ಬಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries