ಟೆಹ್ರಾನ್: ಇರಾನ್‌ನಲ್ಲಿ ಆರ್ಥಿಕ ಕುಸಿತದ ವಿರುದ್ಧ ಸರ್ಕಾರದ ವಿರುದ್ಧ ಭುಗಿಲೆದ್ದಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು, ಇದುವರೆಗೆ ಸುಮಾರು 35 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮೃತರಲ್ಲಿ 29 ಪ್ರತಿಭಟನಾಕಾರರು, ನಾಲ್ಕು ಮಕ್ಕಳು ಹಾಗೂ ಇರಾನ್ ಭದ್ರತಾ ಪಡೆಗಳ ಇಬ್ಬರು ಸದಸ್ಯರು ಸೇರಿದ್ದಾರೆ.
ಕಳೆದ ಒಂದು ವಾರದಿಂದ ಇರಾನ್‌ನ 31 ಪ್ರಾಂತ್ಯಗಳಲ್ಲಿ 27 ಪ್ರಾಂತ್ಯಗಳ 250ಕ್ಕೂ ಹೆಚ್ಚು ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈ ವೇಳೆ 1,200ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಪರಿಸ್ಥಿತಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶಾಂತಿಯುತ ಪ್ರತಿಭಟನಾಕಾರರ ಮೇಲೆ ಇರಾನ್ ಸರ್ಕಾರ ಹಿಂಸಾತ್ಮಕ ಕ್ರಮ ಕೈಗೊಂಡರೆ ಅಮೆರಿಕ ಅವರುಗಳ ರಕ್ಷಣೆಗೆ ಮುಂದಾಗುತ್ತದೆ ಎಂದು ಇರಾನ್‌ಗೆ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ಅಮೆರಿಕ ಸೇನೆ ಟೆಹ್ರಾನ್‌ನ ದೀರ್ಘಕಾಲದ ಮಿತ್ರ ರಾಷ್ಟ್ರವಾದ ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಬಂಧಿಸಿದ ಬಳಿಕ ಟ್ರಂಪ್ ಅವರ ಈ ಹೇಳಿಕೆಗಳು ಹೊಸ ಮಹತ್ವ ಪಡೆದುಕೊಂಡಿವೆ. ಇರಾನ್‌ನಲ್ಲಿನ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಮುಂದಿನ ಬೆಳವಣಿಗೆಗಳತ್ತ ಜಾಗತಿಕ ಸಮುದಾಯ ಕಣ್ಣಿಟ್ಟಿದೆ.

