HEALTH TIPS

ಸ್ಪೇನ್‌: ರೈಲು ಅಪಘಾತದಲ್ಲಿ 39 ಮಂದಿ ಸಾವು

ಅಡಮುಜ್‌: ಸ್ಪೇನ್‌ನ ಅಡಮುಜ್‌ ನಗರದ ಬಳಿ ಎರಡು ರೈಲುಗಳು ಡಿಕ್ಕಿಯಾಗಿ, 39 ಜನರು ಸಾವಿಗೀಡಾಗಿದ್ದಾರೆ. ಭಾನುವಾರ ರಾತ್ರಿ ಅಪಘಾತ ಸಂಭವಿಸಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಲಾಗದಿಂದ ಮ್ಯಾಡ್ರಿಡ್‌ಗೆ ತೆರಳುತ್ತಿದ್ದ ರೈಲಿನಲ್ಲಿ 300 ಜನ ಪ್ರಯಾಣಿಕರಿದ್ದರು.

ಈ ರೈಲು ರಾತ್ರಿ 7.45ಕ್ಕೆ ಹಳಿ ತಪ್ಪಿತು. ಈ ವೇಳೆ ಮ್ಯಾಡ್ರಿಡ್‌ನಿಂದ ಹುಯೆಲ್ವಾಗೆ ಸಂಚರಿಸುತ್ತಿದ್ದ ಇನ್ನೊಂದು ರೈಲು, ಹಳಿ ತಪ್ಪಿದ ರೈಲಿಗೆ ಡಿಕ್ಕಿಯಾಗಿದೆ. ಇದರಲ್ಲಿ 200 ಮಂದಿ ಪ್ರಯಾಣಿಕರಿದ್ದರು.

ಘಟನೆಯಲ್ಲಿ 159 ಜನರು ಗಾಯಗೊಂಡಿದ್ದು, ಈ ಪೈಕಿ 29 ಮಂದಿಯ ಸ್ಥಿತಿ ಗಂಭೀರವಾಗಿದೆ. ಎಲ್ಲರಿಗೂ ಚಿಕಿತ್ಸೆ ಮುಂದುವರಿದಿದೆ. ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರಿದಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries