ದುಬೈ: ಇರಾನ್ ನಲ್ಲಿ ನಡೆದ ರಾಷ್ಟ್ರವ್ಯಾಪಿ ಆಡಳಿತ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 4029 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ ಸಂಸ್ಥೆ ವರದಿ ಮಾಡಿದೆ.
ಮೃತರಲ್ಲಿ 3786 ಪ್ರತಿಭಟನಕಾರರು, 180 ಭದ್ರತಾ ಸಿಬ್ಬಂದಿ, 28 ಮಕ್ಕಳು ಸೇರಿದ್ದಾರೆ.
ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.
ಈ ಹಿನ್ನೆಲೆಯಲ್ಲಿ ದಾವೋಸ್‌ನಲ್ಲಿ ನಡೆಯುತ್ತಿರುವ ಜಾಗತಿಕ ಆರ್ಥಿಕ ವೇದಿಕೆಯ ಸಮಾವೇಶಕ್ಕೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿಗೆ ನೀಡಿದ್ದ ಆಹ್ವಾನವನ್ನು ಹಿಂಪಡೆಯಲಾಗಿದೆ.

