ಮಂಜೇಶ್ವರ : ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಜಾರಿಗೊಳಿಸಿದ ದಿನವಾಗಿ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಕುಳೂರು ವಾರ್ಡ್ ಸದಸ್ಯೆ ಶರ್ಮಿಳ ಎಂ. ಶೆಟ್ಟಿ ಚಾರ್ಲ ಧ್ವಜಾರೋಹಣಗೈದರು. ಕಾರ್ಯಕ್ರಮದಲ್ಲಿ ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಹಾಜಿ ಕಂಚಿಲ ಉಪಸ್ಥಿತರಿದ್ದು ಶುಭ ಹಾರೈಸಿದರು. ಶಾಲಾ ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು. ಎಲ್ಲರಿಗೂ ಸಿಹಿ ತಿಂಡಿ ವಿತರಿಸಲಾಯಿತು.

.jpg)
.jpg)
