ಬದಿಯಡ್ಕ: ಕಿಳಿಂಗಾರು ಎ.ಎಲ್ ಪಿ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು. ಬದಿಯಡ್ಕ ಗ್ರಾಮ ಪಂಚಾಯತಿ ಅಧ್ಯಕ್ಷ ಶಂಕರ ಡಿ. ಅವರು ದ್ವಜಾರೋಹಣಗೈದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀವಿದ್ಯಾ ಎ ಸ್ವಾಗತಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ವಿಷ್ಣು ಪ್ರಕಾಶ್ ಪೆರ್ವ, ಮಾತೃ ಸಂಘದ ಅಧ್ಯಕ್ಷೆ ದಿವ್ಯ ಲಕ್ಷ್ಮಿ ಶುಭ ಹಾರೈಸಿದರು. ಅಧ್ಯಾಪಕ ಅಧ್ಯಾಪಿಕೆಯರು, ಮಕ್ಕಳು ಹಳೆವಿದ್ಯಾರ್ಥಿಗಳು ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

.jpg)
