HEALTH TIPS

ಛತ್ತೀಸಗಢ ಉಕ್ಕು ಕಾರ್ಖಾನೆಯಲ್ಲಿ ಸ್ಫೋಟ: 7 ಕಾರ್ಮಿಕರು ಸಾವು; ಹಲವರಿಗೆ ಗಾಯ

ಬಲೋದಾಬಜಾರ್‌: ಇಲ್ಲಿನ ಉಕ್ಕು ಕಾರ್ಖಾನೆಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ಸ್ಪೋಟದಲ್ಲಿ ಕನಿಷ್ಠ 7 ಕಾರ್ಮಿಕರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.

ಗ್ರಾಮೀಣ ಪ್ರದೇಶವಾದ ಬಕುಲಾಹಿ ಹಳ್ಳಿಯಲ್ಲಿರುವ ಸ್ಪಾಂಜ್ ಉಕ್ಕಿನ ಕಾರ್ಖಾನೆಯಲ್ಲಿ ಗುರುವಾರ ಬೆಳಗ್ಗೆ ಸ್ಫೋಟ ಸಂಭವಿಸಿದೆ.

ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ 7 ಕಾರ್ಮಿಕರು ಮೃತಪಟ್ಟಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪೈಕಿ ಕೆಲ ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆ ಮುಂದುವರೆದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries