ಕಾಸರಗೋಡು: ಪೆರ್ಲದ ವಿದ್ಯಾರಣ್ಯ ವಿದ್ಯಾವರ್ಧಕ ಸಂಘದ ಅಧೀನದಲ್ಲಿ ಚಟುವಟಿಕೆ ನಡೆಸುತ್ತಿರುವ ಶ್ರೀ ಸತ್ಯನಾರಾಯಣ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ ಜ.8ರಂದು ಜರುಗಲಿದೆ. 8ರಂದು ಬೆಳಗ್ಗೆ 9ಕ್ಕೆ ಧ್ವಜಾರೋಹಣದೊಂದಿಗೆ ಸಾಂಸ್ಕøತಿಕ ಕಾರ್ಯಕ್ರಮ ಆರಂಭಗೊಳ್ಳುವುದು.11ಕ್ಕೆ ನಡೆಯುವ ಸಭಾ ಕಾರ್ಯಖ್ರಮದಲ್ಲ ಶಾಲಾ ಸಂಚಾಲಕ ಪಿ.ಎಸ್. ವಿಶ್ವಾಮಿತ್ರ ಅಧ್ಯಕ್ಷತೆ ವಹಿಸುವರು. ಎಣ್ಮಕಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕುಸುಮಾವತೀ ಸಮಾರಂಭ ಉದ್ಘಾಟಿಸುವರು.
ಘನಪಾಠಿ ಡಾ. ಪಳ್ಳತ್ತಡ್ಕ ಶಂಕರನಾರಾಯಣ ಭಟ್, ಎಣ್ಮಕಜೆ ಗ್ರಾಪಂ ಸದಸ್ಯೆ ಆಯಿಷಾ ಎ.ಎ, ವೊಕೇಶನಲ್ ಹೈಯರ್ ಸೆಕಂಡರಿಎಜುಕೇಶನ್ ಸಹಾಯಕ ನಿರ್ದೇಶಕಿ ಉದಯಕುಮಾರಿ ಇ.ಆರ್, ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜು ಪ್ರಾಂಶುಪಾಲ ಪ್ರೊ.ಮಹಮ್ಮದಾಲಿ, ಉಪಜಿಲ್ಲಾ ಶಿಕ್ಷಣಾಧಿಕಾರಿ ಶಶಿಧರ ಎಂ, ಮೊದಲಾದವರು ಅತಿಥಿಗಳಾಗಿ ಭಾಗವಹಿಸುವರು.ಈ ಸಂದರ್ಭ ಸೇವೆಯಿಂದ ನಿವೃತ್ತರಾಗಲಿರುವ ಶಾಲಾ ಶಿಕ್ಷಕರಿಗೆ ಗೌರವಾರ್ಪಣೆ, ಸಾಂಸ್ಕøತಿಕ ಕಾರ್ಯಕ್ರಮಗಳ ಮುಂದುವರಿಯುವುದು.
ಆಮಂತ್ರಣಪತ್ರಿಕೆ ಬಿಡುಗಡೆ:
ಸಮಾರಂಭದ ಆಮಂತ್ರಣಪತ್ರಿಕೆ ಬಿಡುಗಡೆ ಸಮಾರಂಭ ಶ್ರೀಸತ್ಯನಾರಾಯಣ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಪ್ರೌಢಶಾಲಾ ಮುಖ್ಯ ಶಿಕ್ಷಕ ಎನ್. ಕೇಶವ ಪ್ರಕಾಶ್ ಆಮಂತ್ರಣಪತ್ರಿಕೆ ಬಿಡುಗಡೆಗೊಳಿಸಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಂಧ್ಯಾ, ಪ್ರೌಢಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಬಿ.ಎಂ, ಕಿರಿಯ ಪ್ರಾಥಮಿಕ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಸುವರ್ಣ ಉಪಸ್ಥಿತರಿದ್ದರು.


