ತಿರುವನಂತಪುರಂ: ಕೇರಳ ಪೋಲೀಸರು ರಾಜ್ಯದಲ್ಲಿ ಮಾದಕ ದ್ರವ್ಯ ಮಾಫಿಯಾ ವಿರುದ್ಧ ತನ್ನ ಕ್ರಮಗಳನ್ನು ತೀವ್ರಗೊಳಿಸಿದ್ದಾರೆ. 'ಆಪರೇಷನ್ ಡಿ-ಹಂಟ್' ಕಾರ್ಯಾಚರಣೆಯ ಭಾಗವಾಗಿ, ಭಾನುವಾರ (ಜನವರಿ 18) ರಾಜ್ಯಾದ್ಯಂತ ನಡೆದ ದಾಳಿಯಲ್ಲಿ 97 ಜನರನ್ನು ಬಂಧಿಸಲಾಗಿದೆ.
ಮಾದಕ ದ್ರವ್ಯಗಳ ಮಾರಾಟ ಮತ್ತು ಸಂಗ್ರಹಣೆಯಲ್ಲಿ ಭಾಗಿಯಾಗಿರುವ ಶಂಕಿತ 1,489 ಜನರನ್ನು ಪೋಲೀಸರು ವಿವರವಾದ ತಪಾಸಣೆಗೆ ಒಳಪಡಿಸಿದ್ದಾರೆ. ದಾಖಲೆಯ ಭಾಗವಾಗಿ, ನಿಷೇಧಿತ ಮಾದಕ ದ್ರವ್ಯಗಳನ್ನು ಹೊಂದಿದ್ದಕ್ಕಾಗಿ 90 ಹೊಸ ಪ್ರಕರಣಗಳನ್ನು ದಾಖಲಿಸಲಾಗಿದೆ.
ಬಂಧಿತ ವ್ಯಕ್ತಿಗಳಿಂದ ಎಂಡಿಎಂಎ, ಗಾಂಜಾ ಮತ್ತು ಗಾಂಜಾ ಬೀಡಿಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಜ್ಯದಲ್ಲಿ ಮಾದಕ ದ್ರವ್ಯ ಜಾಲಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆಯನ್ನು ಆಯೋಜಿಸಲಾಗಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಮಾದಕ ವಸ್ತುಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸಲು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಮಾದಕ ವಸ್ತು ವಿರೋಧಿ ನಿಯಂತ್ರಣ ಕೊಠಡಿ (ದೂರವಾಣಿ: 9497927797) ಸಿದ್ಧವಾಗಿದ್ದು, ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಪೆÇಲೀಸರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ತಪಾಸಣೆ ಮುಂದುವರಿಸಲು ಗೃಹ ಇಲಾಖೆ ನಿರ್ಧರಿಸಿದೆ.

