ಬದಿಯಡ್ಕ: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ನೇತೃತ್ವದಲ್ಲಿ ನೂತನವಾಗಿ ಕುಂಬ್ಡಾಜೆ ಗ್ರಾಮ ಪಂಚಾಯಿತಿಯ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿ ಆಯ್ಕೆಯಾದ ಪ್ರಿಯಾಂಕ ಎ.ಸಿ.ಅವರನ್ನು ಬಳ್ಳಪದವು ವೀಣಾವಾದಿನಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಕಾಸರಗೋಡು ಜಿಲ್ಲಾ ಪಂಚಾಯಿತಿ ಸದಸ್ಯ ರಾಮಪ್ಪ ಮಂಜೇಶ್ವರ ಶಾಲು ಹೊದಿಸಿ ಸ್ಮರಣಿಕೆ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ, ಪ್ರಧಾನ ಕಾರ್ಯದರ್ಶಿ ಕೆ.ಗಂಗಾಧರ್, ಕೋಶಾಧಿಕಾರಿ ಶ್ರೀಕಾಂತ್ ನೆಟ್ಟಣಿಗೆ, ಕನ್ನಡ ಸಾಹಿತ್ಯ ಪರಿಷತ್ತು ಗಡಿನಾಡಘಟಕ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೊಡಿ, ಡಿವೈಎಸ್ಪಿ ಡಾ. ವಿ. ಬಾಲಕೃಷ್ಣನ್, ರಾಘವ ಚೇರಾಲ್, ಪ್ರೊ.ಎ.ಶ್ರೀನಾಥ್, ಕೆ.ರಾಧಾಕೃಷ್ಣ ಉಳಿಯತ್ತಡ್ಕ, ತೆಕ್ಕೆಕರೆ ಶಂಕರನಾರಾಯಣ ಭಟ್ ಮತ್ತಿತರರು ಉಪಸ್ಥಿತರಿದ್ದರು.

.jpg)
