ಬದಿಯಡ್ಕ: ಕುಂಬ್ಡಾಜೆ ಮುನಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಮಾರ್ಚ್ 1 ರಿಂದ 9ರ ತನಕ ಜರಗಲಿದ್ದು ಧನಸಂಗ್ರಹ ಕಾರ್ಯಗಳಿಗೆ ಎಡನೀರು ಮಠದಲ್ಲಿ ಚಾಲನೆ ನೀಡಲಾಯಿತು.
ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ರಶೀದಿ ಪುಸ್ತಕಗಳನ್ನು ಬಿಡುಗಡೆಗೊಳಿಸಿ ಸುವರ್ಣ ಕಾಣಿಕೆ, ಮಂತ್ರಾಕ್ಷತೆಯನ್ನು ನೀಡಿ ಅನುಗ್ರಹಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಂಕರನಾರಾಯಣ ಮಯ್ಯ ಬದಿಯಡ್ಕ ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು, ಶ್ರೀ ಕ್ಷೇತ್ರದ ಭಗವದ್ಭಕ್ತರು ಈ ಸಂದರ್ಭದಲ್ಲಿ ಜೊತೆಗಿದ್ದರು.

.jpg)
