ಬದಿಯಡ್ಕ: ಬದಿಯಡ್ಕ ಗ್ರಾಮಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಿ. ಶಂಕರ ಹಾಗೂ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಅಶ್ವಿನಿ ಕೆ.ಎಂ. ಅವರನ್ನು ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ನೀರ್ಚಾಲು ಘಟಕದ ವತಿಯಿಂದ ಗುರುವಾರ ಅಭಿನಂದಿಸಲಾಯಿತು. ನೀರ್ಚಾಲು ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್, ಪ್ರಧಾನ ಕಾರ್ಯದರ್ಶಿ ರವಿ ನೀರ್ಚಾಲು, ಕೋಶಾಧಿಕಾರಿ ಗೋಪಾಲ ಬಿ., ಪದಾಧಿಕಾರಿಗಳಾದ ರವಿಶಂಕರ ಕೆ.ವಿ., ಬ್ಲಾ.ಪಂ.ಸದಸ್ಯ ಮಹೇಶ್ ವಳಕ್ಕುಂಜ, ಬದಿಯಡ್ಕ ಘಟಕ ಪದಾಧಿಕಾರಿ ಹಾಗೂ ಗ್ರಾಮಪಂಚಾಯಿತಿ ಸದಸ್ಯ ಅವಿನಾಶ್ ರೈ ವಳಮಲೆ ಉಪಸ್ಥಿತರಿದ್ದರು.

.jpg)
