ಕಾಸರಗೋಡು: ಭಕ್ತಿ, ಶ್ರದ್ಧೆಯಿಂದ ಕುಡಿದ ಭಜನೆಗೆ ಭಗವಂತನನ್ನು ಸಾಕ್ಷಾತ್ಕರಿಸಿಕೊಳ್ಳುವ ಶಕ್ತಿ ಅಡಕವಾಗಿದೆ ಎಂಬುದಾಗಿ ಚಿನ್ಮಯ ಮಿಷನ್ ಕೇರಳ ಮುಖ್ಯಸ್ಥ ಸ್ವಾಮಿ ವಿವಿಕ್ತಾನಂದ ಸರಸ್ವತೀ ತಿಳಿಸಿದ್ದಾರೆ.
ಅವರು ನಗರದ ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ನಡೆದ ಭಜನಾ ಮಂಡಲೋತ್ಸವದ ಸಮಾರೋಪ ಸಮಾರಂಭ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಕ್ಷೇತ್ರ ಟ್ರಸ್ಟ್ ಸಮಿತಿಯ ಗಣೇಶ್ ಅಮೈ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಕೋಟೆಕಣಿ, ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ, ಧಾರ್ಮಿಕ ಮುಂದಾಳು ಡಾ.ಕೆ.ಎನ್ ವೆಂಕಟ್ರಮಣ ಹೊಳ್ಳ, ಮಂದಿರದ ಗುರುಸ್ವಾಮಿನಾರಾಯಣ, ಮಹಿಳಾ ಸಮಿತಿ ಅಧ್ಯಕ್ಷೆ ಶೋಭಾ ಅರವಿಂದ್ ಉಪಸ್ಥಿತರಿದ್ದರು. ಗುರುಪ್ರಸಾದ್ ಕೋಟೆಕಣಿ ಸಮಾರೋಪ ಭಾಷಣ ಮಾಡಿದರು.
ಕೆ. ಜಗದೀಶ್ ಕೂಡ್ಲು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಮಿತಿಸಂಚಾಲಕ ಪ್ರವೀಣ್‍ಕುಮಾರ್ ವಂದಿಸಿದರು.


