ಕಾಸರಗೋಡು : ಕಾಸರಗೋಡು ಜಿಲ್ಲಾ ಪಂಚಾಯತಿಯಲ್ಲಿ 179 ದಿನಗಳ ಕಾಲ ದಿನಗೂಲಿ ಆಧಾರದ ಮೇಲೆ ಕನ್ನಡ ಭಾಷಾ ಅನುವಾದಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಸ್ಸೆಲ್ಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯಾಗಿದ್ದು, ಕನ್ನಡದಿಂದ ಮಲಯಾಳಂಗೆ ಮತ್ತು ಮಲಯಾಳಂನಿಂದ ಕನ್ನಡಕ್ಕೆ ಭಾಷಾಂತರಿಸುವಲ್ಲಿ ಪ್ರಾವೀಣ್ಯತೆ ಇರಬೇಕು. ಮೂಲ ಕಂಪ್ಯೂಟರ್ ಜ್ಞಾನ ಕನ್ನಡ ಮತ್ತು ಮಲಯಾಳಂನಲ್ಲಿ ಟೈಪ್ ಮಾಡುವ ಸಾಮಥ್ರ್ಯ (ಕನ್ನಡ ಟೈಪಿಂಗ್ ಕಡ್ಡಾಯ), ಮಲಯಾಳಂ ಅನುವಾದದಲ್ಲಿ ಅನುಭವವಿರುವವರಿಗೆ ಆದ್ಯತೆ ನೀಡಲಾಗುವುದು. 18 ರಿಂದ 41 ವರ್ಷಗಳ ವಯಸ್ಸಿನ ಮಿತಿಯವರು ಅರ್ಜಿ ಸಲ್ಲಿಸಬಹುದು. ವಯಸ್ಸು ಮತ್ತು ಶೈಕ್ಷಣಿಕ ಅರ್ಹತೆಯನ್ನು ಸಾಬೀತುಪಡಿಸುವ ಪ್ರಮಾಣಪತ್ರಗಳ ಪ್ರತಿಗಳೊಂದಿಗೆ ಅರ್ಜಿಗಳನ್ನು ಕಾರ್ಯದರ್ಶಿ, ಕಾಸರಗೋಡು ಜಿಲ್ಲಾ ಪಂಚಾಯತಿ, ವಿದ್ಯಾನಗರ, ಪಿನ್‍ಕೋಡ್- 671 123 ಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತಿಯನ್ನು ಕೆಲಸದ ದಿನಗಳಲ್ಲಿ ಸಂಪರ್ಕಿಸಲು ಸೂಚಿಸಲಾಗಿದೆ.

