ಪ್ರಯಾಗ್‌ರಾಜ್: ಗಾಳಿಪಟ ಹಾರಾಟ ಸ್ಪರ್ಧೆಯ ಸಂದರ್ಭದಲ್ಲಿ ಚೀನಾದ 'ಮಾಂಜಾ' (ಸಿಂಥೆಟಿಕ್ ಅಥವಾ ನೈಲಾನ್ ದಾರಗಳು) ತಯಾರಿಕೆ, ಬಳಕೆ ಮತ್ತು ಮಾರಾಟವನ್ನು ನಿಲ್ಲಿಸಿರುವುದನ್ನು ಉತ್ತರ ಪ್ರದೇಶ ಸರ್ಕಾರವು ಖಚಿತಪಡಿಸಿಕೊಳ್ಳಬೇಕು ಎಂದು ಅಲಹಾಬಾದ್ ಹೈಕೋರ್ಟ್ ಪುನರುಚ್ಚರಿಸಿದೆ.
ಗಾಳಿಪಟ ಹಾರಾಟ ಸ್ಪರ್ಧೆಯಲ್ಲಿ ಚೀನಾದ 'ಮಾಂಜಾ'ದ ಕುರಿತು ನ್ಯಾಯಾಲಯ ಈಗಾಗಲೇ ಹೊರಡಿಸಿರುವ ನಿರ್ದೇಶನಗಳನ್ನು ಸರ್ಕಾರ ಪಾಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಅರುಣ್ ಬನ್ಸಾಲಿ ಮತ್ತು ನ್ಯಾಯಮೂರ್ತಿ ಕ್ಷಿತಿಜ್ ಶೈಲೇಂದ್ರ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು ಸೂಚನೆ ನೀಡಿದೆ.
ಚೀನೀ 'ಮಾಂಜಾ' ಮಾನವರು ಮತ್ತು ಪಕ್ಷಿಗಳ ಜೀವಕ್ಕೆ ಅಪಾಯ ಉಂಟುಮಾಡುತ್ತದೆ ಎಂಬುದನ್ನು ನ್ಯಾಯಾಲಯ ಗಮನಿಸಿದೆ. ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಉತ್ತರ ಪ್ರದೇಶ ಸೇರಿ ದೇಶದ ವಿವಿಧ ಭಾಗಗಳಲ್ಲಿ ಗಾಳಿಪಟ ಸ್ಪರ್ಧೆ ಆಯೋಜನೆ ಮಾಡಲಾಗುತ್ತದೆ.
ಚೀನೀ 'ಮಾಂಜಾ'ದ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಕೋರಿ ಹಿಮಾಂಶು ಶ್ರೀವಾಸ್ತವ ಮತ್ತು ಇತರ ಇಬ್ಬರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ ಈ ಸೂಚನೆ ನೀಡಿದೆ.
ಈ ವಿಷಯದ ಕುರಿತು ನವೆಂಬರ್ 15, 2025ರಂದಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ನ್ಯಾಯಾಲಯ, 'ಚೀನಾದ ಮಾಂಜಾ ಉತ್ಪಾದನೆ, ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲು ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು' ಇದೀಗ ಅದೇ ನಿರ್ದೇಶನವನ್ನು ಪುನರುಚ್ಚರಿಸಿದೆ.

