ತಿರುವನಂತಪುರಂ: ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿನ ಚಿನ್ನ ಕಳವು ಪ್ರಕರಣದಲ್ಲಿ ಬಂಧಿತರಾಗಿರುವ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಮಾಜಿ ಸದಸ್ಯ ಕೆ.ಪಿ. ಶಂಕರ ದಾಸ್ ಅವರನ್ನು ಖಾಸಗಿ ಆಸ್ಪತ್ರೆಯಿಂದ ಸರ್ಕಾರಿ ವೈದ್ಯಕೀಯ ಕಾಲೇಜು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಶ್ರೀಕೋವಿಲ್‌ನ (ಗರ್ಭಗುಡಿ) ಬಾಗಿಲಿನ ಚೌಕಟ್ಟುಗಳಲ್ಲಿನ ಹಾಗೂ ದ್ವಾರಪಾಲಕರ ಪ್ರತಿಮೆಗಳ ಮೇಲೆ ಲೇಪಿಸಲಾಗಿದ್ದ ಚಿನ್ನದ ಕಳ್ಳತನ ಪ್ರಕರಣದಲ್ಲಿ ಶಂಕರ ದಾಸ್ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ಬಂಧಿಸಲಾಗಿತ್ತು. ಬಳಿಕ ಪೊಲೀಸ್ ಕಾವಲಿನಲ್ಲಿ ಚಿಕಿತ್ಸೆ ಮುಂದುವರಿದಿತ್ತು.
ಶಂಕರ ದಾಸ್, ಪ್ರಕರಣದಲ್ಲಿ ಬಂಧಿತರಾದ 12ನೇ ಆರೋಪಿ.

