HEALTH TIPS

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ ವರ್ಧಂತ್ಯುತ್ಸವ

ಕುಂಬಳೆ: ಭಾರತೀಯ ಸಂಸ್ಕøತಿಯನ್ನು ನೀಡುತ್ತಾ ಮಕ್ಕಳನ್ನು ಸಂಸ್ಕಾರಯುತರನ್ನಾಗಿಸುವುದಲ್ಲದೆ ಮನೆಮಂದಿಯೂ ಉತ್ತಮ ಸಂಸ್ಕಾರವನ್ನು ರೂಢಿಸಿಕೊಳ್ಳುವ ವಾತಾವರಣವನ್ನು ಈ ಶಾಲೆಯು ನಿರ್ಮಿಸಿದೆ. ಗುರುಹಿರಿಯರನ್ನು ಗೌರವದಿಂದ ಕಾಣಬೇಕು ಎಂಬ ಚಿಂತನೆ ಮಕ್ಕಳಲ್ಲಿ ಮನೆಮಾಡುವಂತಹ ಶಿಕ್ಷಣವನ್ನು ಇಲ್ಲಿ ನೀಡುತ್ತಿರುವುದು ಶ್ಲಾಘನೀಯ ಎಂದು ಕುಂಬಳೆ ಉಪಜಿಲ್ಲಾ ವಿದ್ಯಾಕಾರಿ ಎಂ.ಶಶಿಧರ ಹೇಳಿದರು.

ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಶನಿವಾರ ನಡೆದ ವರ್ಧಂತ್ಯುತ್ಸವದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.  


25 ವರ್ಷಗಳ ಬಾಲ್ಯದಲ್ಲಿ ಈ ವಿದ್ಯಾಸಂಸ್ಥೆಯಿದೆ. ಇನ್ನಷ್ಟು ಅಭಿವೃದ್ಧಿ ಪಥದತ್ತ ಸಾಗುತ್ತಾ ನಾಡಿಗೆ ಉತ್ತಮ ಜನಾಂಗವನ್ನು ನೀಡುವಂತಾಗಲಿ ಎಂದರು. 

ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಬೆಜಪ್ಪೆ ಅಧ್ಯಕ್ಷತೆ ವಹಿಸಿ ಶಾಲೆಯ ವಿವಿಧ ಕಾರ್ಯಗಳ ಕುರಿತು ಬೆಳಕು ಚೆಲ್ಲಿದರು. ಶ್ರೀರಾಮಚಂದ್ರಾಪುರ ಮಠದ ಮುಳ್ಳೇರಿಯ ಮಂಡಲ ಗುರಿಕ್ಕಾರ ಸತ್ಯನಾರಾಯಣ ಭಟ್ ಮೊಗ್ರ, ಮಹಾಮಂಡಲ ಸೇವಾವಿಭಾಗ ಅಧ್ಯಕ್ಷ ಕೃಷ್ಣಮೂರ್ತಿ ಮಾಡಾವು, ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಜಯದೇವ ಖಂಡಿಗೆ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಉದಯಕುಮಾರ್ ಮಾಯಿಪ್ಪಾಡಿ, ಮಾತೃಸಂಘದ ಅಧ್ಯಕ್ಷೆ ದೀಪಶ್ರೀ ದೊಡ್ಡಮಾಣಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. 

ಅಡೂರು ಬಾಲಕೃಷ್ಣ ತಂತ್ರಿಗಳ ಸ್ಮರಣಾರ್ಥ ವಿವಿಧ ಶಾಲಾ ವಿದ್ಯಾರ್ಥಿಗಳಿಗೆ ಕೊಡಮಾಡುವ ಪ್ರಶಸ್ತಿಯನ್ನು ಈ ಬಾರಿ ಭಾರತೀ ವಿದ್ಯಾಪೀಠದ ವಿದ್ಯಾರ್ಥಿಗೆ ವಿತರಿಸಿ ಚುಟುಕು ಸಾಹಿತ್ಯ ಪರಿಷತ್‍ನ ಕಾಸರಗೋಡು ಜಿಲ್ಲಾ ಅಧ್ಯಕ್ಷ ವಿರಾಜ್ ಅಡೂರು ಮಾತನಾಡಿದರು. ಶಾಲಾ ಆಡಳಿತ ಮಂಡಳಿಯ ಬಾಲಕೃಷ್ಣ ಶರ್ಮ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹ ಅಧ್ಯಾಪಿಕೆ ಚಿತ್ರಾ ಸರಸ್ವತಿ ವಾರ್ಷಿಕ ವರದಿ ವಾಚಿಸಿದರು. ಅಧ್ಯಾಪಿಕೆ ಶ್ರೀದೇವಿ ವಿವಿಧ ದತ್ತಿನಿಧಿಗಳ ವಿವರಗಳನ್ನು ತಿಳಿಸಿದರು. ಹಳೆವಿದ್ಯಾರ್ಥಿಗಳ ನೇತೃತ್ವದಲ್ಲಿ ಮುಖ್ಯೋಪಾಧ್ಯಾಯರನ್ನು ಗೌರವಿಸಲಾಯಿತು. ಅಧ್ಯಾಪಕ ಹರಿಪ್ರಸಾದ್ ಮಾತನಾಡಿದರು. ಅಧ್ಯಾಪಿಕೆ ಚೈತ್ರ ಸ್ವಾಗತಿಸಿ, ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆಮಾರ್ಗ ವಂದಿಸಿದರು. ನಂತರ ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಿತು. ಶಾಲಾ ವಿದ್ಯಾರ್ಥಿಗಳು ಅಚ್ಚುಕಟ್ಟಾಗಿ ಕಾರ್ಯಕ್ರಮ ನಿರೂಪಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries