ಪೆರ್ಲ: ಸ್ವರ್ಗ ಸ್ವಾಮಿ ವಿವೇಕಾನಂದ ಎ.ಯು.ಪಿ ಶಾಲೆಯ ವಾರ್ಷಿಕೋತ್ಸವ ಮತ್ತು ವಿವೇಕಾನಂದ ಜಯಂತಿ ಆಚರಣೆ ಜ. 31 ಶನಿವಾರದಂದು ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಧ್ಯಾಹ್ನ 2 ರಿಂದ ಶಾಲಾ ಮಕ್ಕಳ ಪ್ರತಿಭಾ ಪ್ರದರ್ಶನ, ಮಧ್ಯಾಹ್ನ 3 ರಿಂದ ಸ್ವರ್ಗ, ಶಿವಗಿರಿ, ಕೆಂಗಣಾಜೆ, ಸರ್ಪಮಲೆ, ಅಡ್ಕಸ್ಥಳ ಅಂಗನವಾಡಿ ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ. ಸಂಜೆ 4:30ಕ್ಕೆ ಎಣ್ಮಕಜೆ ಗ್ರಾ.ಪಂ.ಅಧ್ಯಕ್ಷೆ ಕುಸುಮಾವತಿ ಬಿ. ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಡಾ.ಶ್ರೀಶ ಭಟ್ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು, ಕು. ಡಾ. ಶಿಲ್ಪ ಯಂ, ಕು.ಜೀವಿತ ಎಸ್.ಕೆ, ಶಾಲಾ ವ್ಯವಸ್ಥಾಪಕ ಹೃಷಿಕೇಶ ವಿ.ಎಸ್, ವಾರ್ಡ್ ಸದಸ್ಯ ರಾಮಚಂದ್ರ ಎಂ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಕಾರ್ತಿಕ್ ಶಾಸ್ತ್ರಿ ಖಂಡೇರಿ, ಮಾತೃ ಸಂಘದ ಅಧ್ಯಕ್ಷೆ ಗಾಯತ್ರಿ ಮೊಗೇರು, ಮುಖ್ಯ ಶಿಕ್ಷಕಿ ಗೀತಾಕುಮಾರಿ. ಬಿ. ಭಾಗವಹಿಸಿವರು. ಈ ಸಂದರ್ಭದಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುವುದು. 7ನೇ ತರಗತಿ ಮಕ್ಕಳ ನೇತೃತ್ವದಲ್ಲಿ ನಿರ್ಮಾಣಗೊಂಡ 'ಮೌಲ್ಯ' ಕಿರುಚಿತ್ರ ತೆರೆಕಾಣಲಿದೆ. ಸಂಜೆ 6 ರಿಂದ ಮಕ್ಕಳ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.

