ಕಾಸರಗೋಡು: ಎರಡು ಪ್ರತ್ಯೇಕ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಆಟೋಚಾಲಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮೇಲ್ಪರಂಬ ಪೊಲಿಸ್ ಠಾಣೆ ವ್ಯಾಪ್ತಿಯ 14ರ ಹರೆಯದ ಬಾಲಕಿಯನ್ನು ದುರುದ್ದೇಶಪೂರ್ವಕವಾಗಿ ಮನೆಗೆ ಒತ್ತಾಯದಿಂದ ಕರೆಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿ ಕೀಯೂರು ನಿವಾಸಿ ರೋಶಿದ್ ಎಂಬಾತನನ್ನು ಪೊಲೀಸರು ಬಂಧಿಸಿ ಈತನ ವಿರುದ್ಧ ಪೋಕ್ಸೋ ಅನ್ವಯ ಕೇಸು ದಾಖಲಿಸಿಕೊಂಡಿದ್ದಾರೆ. ಈತನ ವಿರುದ್ಧ ಈ ಹಿಂದೆಯೂ ಪೋಕ್ಸೋ ಕೇಸು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಆದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 13ರ ಹರೆಯದ ಬಾಲಕಗೆ ಸಲಿಂಗ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆಟೋ ಚಾಲಕ ಅಬೂಬಕ್ಕರ್(50)ಎಂಬಾತನನ್ನು ಪೊಲೀಸರು ಬಂಧಿಸಿ, ಈತನ ವಿರುದ್ಧ ಪೋಕ್ಸೋ ಅನ್ವಯ ಕೇಸು ದಾಖಲಿಸಿಕೊಂಡಿದ್ದಾರೆ.

