HEALTH TIPS

ಕನಿಷ್ಠ ವೇತನ: ಕೇಂದ್ರ, ರಾಜ್ಯಗಳಿಗೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಮನೆ ಕೆಲಸದವರಿಗೆ ಕಾನೂನು ಚೌಕ್ಕಟ್ಟಿನಲ್ಲಿ ಕನಿಷ್ಠ ವೇತನ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್‌ಮಲ್ಯ ಬಾಗ್ಚಿ ಅವರಿದ್ದ ಪೀಠ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ನಿರಾಕರಿಸಿತು.

ದೇಶದಲ್ಲಿ ಕಾರ್ಮಿಕ ಸಂಘಟನೆಗಳು ಏನು ಕೆಲಸ ಮಾಡುತ್ತಿವೆ ಎಂಬುದು ಗೊತ್ತಿದೆ, ಕಡ್ಡಾಯ ಕನಿಷ್ಠ ವೇತನ ನಿಗದಿ ಮಾಡಿದರೆ ಕೆಲಸ ಕೊಡುವವರನ್ನು ಸಂಕಷ್ಟಕ್ಕೆ ತಳ್ಳಬಹುದು. ಏಕೆಂದರೆ ಕಾರ್ಮಿಕ ಸಂಘಗಳು ಪ್ರತಿಯೊಂದು ಮನೆಯನ್ನೂ ಮೊಕದ್ದಮೆಗೆ ಎಳೆಯಬಹುದು. ಈ ಬೆಳವಣಿಗೆ ಗೃಹ ಕಾರ್ಮಿಕರನ್ನು ನೇಮಿಸಿಕೊಳ್ಳುವಲ್ಲಿ ಹಿಂಜರಿಕೆಗೆ ಕಾರಣವಾಗಬಹುದು ಎಂದು ನ್ಯಾಯಪೀಠ ಕಳವಳ ವ್ಯಕ್ತಪಡಿಸಿತು.

ಕಾನೂನು ಬದಲಾವಣೆ ಸಂದರ್ಭದಲ್ಲಿ ಮಧ್ಯಪ್ರವೇಶಿಸಲು ನ್ಯಾಯಾಲಯಕ್ಕೆ ಸೀಮಿತ ಅಧಿಕಾರವಿದೆ, ಅರ್ಜಿದಾರರು ಸಂಬಂಧಪಟ್ಟ ರಾಜ್ಯಗಳ ಅಧಿಕಾರಿಗಳನ್ನು ಸಂಪರ್ಕಿಸಲು ಪೀಠವು ಸೂಚಿಸಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries