ಪೆರ್ಲ: ಸಂಸ್ಕøತ ಎಲ್ಲಾ ಭಾಷೆಗಳಿಗೂ ಮೂಲವಾಗಿದ್ದು, ಈ ನೆಲದ ಸಂಸ್ಕøತಿ ಬಲಗೊಳ್ಳಲು ಪ್ರಮುಖ ಮಾಧ್ಯಮವಾಗಿ ಸಂಸ್ಕøತ ಬೆಳೆದಿರುವುದಾಗಿ ಘನಪಾಠಿ ಡಾ. ಪಳ್ಳತ್ತಡ್ಕ ಶಂಕರನಾರಾಯಣ ಭಟ್ ತಿಳಿಸಿದ್ದಾರೆ.
ಅವರು ಗುರುವಾರ ಪೆರ್ಲದ ವಿದ್ಯಾರಣ್ಯ ವಿದ್ಯಾವರ್ಧಕ ಸಂಘದ ಅಧೀನದಲ್ಲಿ ಚಟುವಟಿಕೆ ನಡೆಸುತ್ತಿರುವ ಶ್ರೀ ಸತ್ಯನಾರಾಯಣ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ತಾವು ಕಲಿತ ಶಾಲೆ, ಗುರುಗಳು ಹಾಗೂ ಹೆತ್ತವರನ್ನು ಮರೆತಲ್ಲಿ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಿಲ್ಲ ಎಂದು ತಿಳಿಸಿದ ಅವರು, ನಾವು ಎಷ್ಟೇ ಎತ್ತರಕ್ಕೆ ಬೆಳೆದರೂ, ನಮ್ಮತನದೊಂದಿಗೆ ಜೀವನ ಸಾಧಿಸುವುದನ್ನು ಮರೆಯಬಾರದು ಎಂದು ತಿಳಿಸಿದರು.
ಎಣ್ಮಕಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕುಸುಮಾವತೀ ಟೀಚರ್ ಸಮಾರಂಭ ಉದ್ಘಾಟಿಸಿದರು. ಮಂಗಳೂರು ಕೆಎಂಸಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಪ್ರಸನ್ನ ಮಿತ್ರ ಅಧ್ಯಕ್ಷತೆ ವಹಿಸಿದ್ದರು.
ಮಂಜೇಶ್ವರ.ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜು ಪ್ರಾಂಶುಪಾಳ ಪ್ರೊ. ಮಹಮ್ಮದಾಲಿ ಪೆರ್ಲ, ಎಣ್ಮಕಜೆ ಗ್ರಾಪಂ ಸದಸ್ಯರಾದ ಆಯಿಷಾ ಎ.ಎ, ಆಯಿಷತ್ ರಾಬಿಯ, ವಿಜಯ ಟೀಚರ್, ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಶಶಿಧರ ಎಂ, ಮಾಯಿಪ್ಪಾಡಿ 'ಡಯೆಟ್'ಉಪನ್ಯಾಸಕಿ ದಿವ್ಯಾ, ಪೆರ್ಲ ಎಸ್‍ಎನ್ ಪ್ರೌಢಶಾಲಾ ರಕ್ಷಕ ಶಿಕ್ಷಕ ಸಂಘದ ಅದ್ಯಕ್ಷ ಪುರುಷೋತ್ತಮ ಬಿ.ಎಂ, ಕಿರಿಯ ಪ್ರಾಥಮಿಕ ಶಾಲಾ ರಕ್ಷಕ ಶಿಕ್ಷಕ ಸಂಘದ ಅದ್ಯಕ್ಷ ರಾಜೇಶ್ ಸುವರ್ಣ, ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷ ಸದಶಿವ ಭಟ್ ಹರಿನಿಲಯ, ವಿದ್ಯಾರಣ್ಯ ವಿದ್ಯಾವರ್ಧಕ ಸಂಘದ ಸದಸ್ಯ ಬಿ.ಎಸ್ ಗಾಂಭಿರ್ ಉಪಸ್ಥಿತರಿದ್ದರು.
ಈ ಸಂದರ್ಭ ಶಾಲೆಯಿಂದ ಈ ವರ್ಷ ನಿವೃತ್ತರಾಗಲಿರುವ ಶಿಕ್ಷಕರಾದ ಶ್ರೀಧರ ಭಟ್, ಸತೀಶ್ ಪುಣಿಂಚಿತ್ತಾಯ ಅವರನ್ನು ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ಶ್ರೀ ಸ. ನಾ ಪ್ರೌಢ ಶಾಲೆ ಮುಖ್ಯ ಶಿಕ್ಷಕ ಎನ್. ಕೇಶವ ಪ್ರಕಾಶ್ ಸ್ವಾಗತಿಸಿದರು. ಶಿಕ್ಷಕಿ ಅಕ್ಷತಾ ಹಾಗೂ ವಿದ್ಯಾರ್ಥಿನಿ ವಿಸ್ಮಿತಾ ಕಾರ್ಯಕ್ರಮ ನಿರೂಪಿಸಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಂಧ್ಯಾ ಟೀಚರ್ ವಂದಿಸಿದರು. ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.


