ಮುಳ್ಳೇರಿಯ: ಖ್ಯಾತ ಯಕ್ಷಗಾನ ಕಲಾವಿದ, ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಅಧ್ಯಕ್ಷ, ಸಂಘಟಕ ಎನ್.ಚನಿಯಪ್ಪ ನಾಯ್ಕ್ ಅವರು ಕರ್ನಾಟಕ ಜಾನಪದ ಪರಿಷತ್ತು ಜಾನಪದ ಲೋಕ ಬೆಂಗಳೂರು ನೀಡುವ 2026ನೇ ಸಾಲಿನ ಜಾನಪದ ಲೋಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷ ಪೆÇ್ರ. ಹಿ.ಚಿ.ಬೋರಲಿಂಗಯ್ಯ ಅವರು ಈ ಪ್ರಶಸ್ತಿ ಘೋಷಿಸಿದ್ದಾರೆ.
ಫೆ. 8ರಂದು ರಾಮನಗರ ಜಾನಪದ ಲೋಕದಲ್ಲಿ ನಡೆಯಲಿರುವ ವಿದ್ಯಾರ್ಥಿ ಜಾನಪದ ಲೋಕೋತ್ಸವ ಕಾರ್ಯಕ್ರಮದಲ್ಲಿ ಜಾನಪದ ಲೋಕ ಪ್ರಶಸ್ತಿ ವಿತರಿಸಲಾಗುವುದು. ಪ್ರಶಸ್ತಿ ಪತ್ರ, ಸ್ಮರಣಿಕೆ ಹಾಗೂ 10,000ರೂ. ನಗದು ಒಳಗೊಂಡಿರುತ್ತದೆ.
ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಗ್ರಾಮದ ನಿಡಿಯಡ್ಕ ನಿವಾಸಿಯಾದ ಎನ್.ಚನಿಯಪ್ಪ ನಾಯ್ಕ್ ಅವರು ನಿವೃತ್ತ ಬೋಧಕೇತರ ಸಿಬ್ಬಂದಿಯಾಗಿದ್ದು, ಖ್ಯಾತ ಹಾಸ್ಯ ಯಕ್ಷಗಾನ ಕಲಾವಿದರೂ ಆಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷರಾಗಿ ಸಾಂಸ್ಕೃತಿಕ ವಲಯದಲ್ಲಿ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ.


