HEALTH TIPS

ಇತಿಹಾಸದಲ್ಲೇ ಮೊದಲ ಬಾರಿಗೆ ಭಾನುವಾರ ಕೇಂದ್ರ ಬಜೆಟ್ ಮಂಡನೆಗೆ ಸಜ್ಜು

ನವದೆಹಲಿ: ಮುಂದಿನ ಹಣಕಾಸು ವರ್ಷದ ಕೇಂದ್ರ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗುವ ನಿರೀಕ್ಷೆಯಿದ್ದು, ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಭಾನುವಾರ ಬಜೆಟ್ ಮಂಡನೆಯಾಗುತ್ತಿದೆ.

ರಾಷ್ಟ್ರಪತಿ ಭಾಷಣದೊಂದಿಗೆ ಬಜೆಟ್ ಅಧಿವೇಶನ ಜನವರಿ 28ರಂದು ಆರಂಭವಾಗಲಿದೆ. ಸಂಸದೀಯ ವ್ಯವಹಾರಗಳ ಕುರಿತ ಸಂಪುಟ ಸಮಿತಿ ಈ ಬಗ್ಗೆ ಅಂತಿಮ ನಿರ್ಧಾರವನ್ನು ಬುಧವಾರ ಕೈಗೊಳ್ಳಲಿದ್ದು, ಫೆಬ್ರವರಿ 1ರಂದೇ ಬಜೆಟ್ ಮಂಡಿಸುವ ಸಂಪ್ರದಾಯವನ್ನು ಮುಂದುವರಿಸಲಿದೆ ಎಂದು ತಿಳಿದು ಬಂದಿದೆ.

ಕೇಂದ್ರ ಸರ್ಕಾರ 2017 ರಿಂದೀಚೆಗೆ ಫೆಬ್ರವರಿ 1ರಂದು ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡಿಸುತ್ತಾ ಬಂದಿದೆ. ಮಾಜಿ ಹಣಕಾಸು ಸಚಿವ ದಿವಂಗತ ಅರುಣ್ ಜೇಟ್ಲಿ ಈ ಸಂಪ್ರದಾಯವನ್ನು ಆರಂಭಿಸಿದ್ದು, ಆ ಬಳಿಕ ಸರ್ಕಾರ ಇದನ್ನೇ ಮುಂದುವರಿಸಿಕೊಂಡು ಬಂದಿದೆ. 2017ಕ್ಕೆ ಮುನ್ನ ಫೆಬ್ರವರಿ 28ರಂದು ಬಜೆಟ್ ಮಂಡನೆಯಾಗುತ್ತಿತ್ತು.

ಈ ಬಾರಿ ಫೆಬ್ರವರಿ 1 ಭಾನುವಾರವಾಗಿದ್ದು, ಇದು ಗುರು ರವಿದಾಸ್ ಅವರ ಜಯಂತಿಯ ದಿನವೂ ಆಗಿದೆ. ಇದು ನಿರ್ಬಂಧಿತ ರಜಾದಿನ. ರಜಾದಿನವಾಗಿದ್ದರಿಂದ ಸರ್ಕಾರಿ ಕಚೇರಿಗಳು ಮತ್ತು ಷೇರು ಮಾರುಕಟ್ಟೆ ಮುಚ್ಚಿರುತ್ತದೆ.

ಜನವರಿ 29ರಂದು ಆರ್ಥಿಕ ಸಮೀಕ್ಷೆಯನ್ನು ಪ್ರಕಟಿಸಲಾಗುತ್ತದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಬಳಿಕ ಜನವರಿ 30 ಮತ್ತು 31 ರಜಾದಿನವಾಗಿರುತ್ತದೆ. ಮೊದಲ ಹಂತದಲ್ಲಿ ಬಜೆಟ್ ಅಧಿವೇಶನ ಮೂರು ವಾರಗಳ ಕಾಲ ನಡೆಯಲಿದ್ದು, ಎರಡನೇ ಭಾಗ ನಾಲ್ಕು ವಾರ ನಡೆಯುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries