ಕಾಸರಗೋಡು: ಯುವ ಮೋರ್ಚಾ ಕಾಸರಗೋಡು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಯುವ ಸಮಾವೇಶವನ್ನು ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಮಂದಿರದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮಹೇಶ್ ಗೋಪಾಲ್ ಉದ್ಘಾಟಿಸಿ ಮಾತನಾಡಿ, ನರೇಂದ್ರ ಮೋದಿಯವರ ಆಡಳಿತವು ಯುವ ಪೀಳಿಗೆಯಲ್ಲಿ ಆತ್ಮವಿಶ್ವಾಸ ತುಂಬಿದ್ದು, ಇದರಿಂದ ಉತ್ತಮ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ವಿದೇಶಗಳಿಗೆ ವಲಸೆ ಹೋಗುವ ಪ್ರವೃತ್ತಿ ಕಡಿಮೆಯಾಗಿದೆ. ಉನ್ನತ ಶಿಕ್ಷಣ, ಕೃಷಿ ಸಂಬಂಧಿತ ಮತ್ತು ಆಹಾರ ಸಂಸ್ಕರಣಾ ಕ್ಷೇತ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಪ್ರವೇಶಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ತಿಳಿಸಿದರು.
ಯುವ ಮೋರ್ಚಾ ಜಿಲ್ಲಾಧ್ಯಕ್ಷ ಅಶ್ವಿನ್ ಕೊಲ್ಲಾಲೈಲ್ ಅಧ್ಯಕ್ಷತೆ ವಹಿಸಿದ್ದರು. ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಕೀಲ ಧನುಷ್ ಎಚ್.ಎನ್. ಮತ್ತು ಪ್ರದೀಪ್ ತಾಳಿಪಡ್ಪು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧಿಸಿದವರನ್ನು ಸನ್ಮಾನಿಸಲಾಯಿತು.


