HEALTH TIPS

ಕಾಸರಗೋಡಿನ ಕನ್ನಡ ಶಾಲೆಗಳ ಮೇಲೆ ಮಲಯಾಳ ಹೇರಿಕೆಯಿಂದ ಸರ್ಕಾರ ಹಿಂದೆ ಸರಿಯಬೇಕು-"ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ"ದ ವತಿಯಿಂದ ಕೇರಳ ಸರ್ಕಾರಕ್ಕೆ ಮನವಿ

ಕಾಸರಗೋಡು: ಗಡಿನಾಡು ಕಾಸರಗೋಡಿನಲ್ಲಿ ದಶಕಗಳಿಂದ ಕನ್ನಡ ಭಾಷೆ ಮತ್ತು ಸಂಸ್ಕøತಿಯನ್ನು ಪೆÇೀಷಿಸಿಕೊಂಡು ಬರುತ್ತಿರುವ ಕನ್ನಡ ಶಾಲೆಗಳ ಮೇಲೆ ವ್ಯವಸ್ಥಿತವಾಗಿ ನಡೆಯುತ್ತಿರುವ ಮಲಯಾಳ ಭಾಷೆಯ ಹೇರಿಕೆಯನ್ನು ಕೈಬಿಡುವಂತೆ "ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ" ಸಮಿತಿ ರಾಜ್ಯ ಘಟಕ ಸ್ಥಾಪಕಾಧ್ಯಕ್ಷ ಉನೈಸ್‍ಪೆರಾಜೆ ಅವರು ಕಾಸರಗೋಡಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.  

ಕಾಸರಗೋಡಿನ ಕನ್ನಡಿಗರು ಇಲ್ಲಿನ ಮೂಲ ನಿವಾಸಿಗಳಾಗಿದ್ದು, ಕನ್ನಡ ಮಾಧ್ಯಮದಲ್ಲೇ ಓದು ಹಾಗೂ ವ್ಯವಹಾರ ಕಂಡುಕೊಂಡವರು. ಕೇರಳ ಸರ್ಕಾರ  ಏಕಾಏಕಿ ಮಲಯಾಳ ಹೇರಿಕೆ ಮಾಡಿದಲ್ಲಿ ಕನ್ನಡಿಗರಿಲ್ಲ ಅತಂತ್ರ ಸ್ಥಿತಿ ಎದುರಿಸಬೇಕಾಗುವುದು. ಕಾಸರಗೋಡಿನ ಆಡಳಿತಾತ್ಮಕ ಮತ್ತು ಶೈಕ್ಷಣಿಕ ವಲಯದಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿ, ಮಲಯಾಳಂ ಭಾಷೆಯ ಹೇಳಿಕೆ ಮತ್ತು ಆದೇಶಗಳನ್ನು ಕಡ್ಡಾಯಗೊಳಿಸುತ್ತಿರುವುದು ಭಾಷಾ ಅಲ್ಪಸಂಖ್ಯಾತರಿಗೆ ಸಂವಿಧಾನ ನೀಡಿರುವ ಹಕ್ಕುಗಳ ಉಲ್ಲಂಘನೆಯಾಗಿದೆ. ಕನ್ನಡ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಮತ್ತು ಖಾಲಿ ಇರುವ ಕನ್ನಡ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡದೆ ಇರುವುದು ಕನ್ನಡ ಶಿಕ್ಷಣವನ್ನು ಹತ್ತಿಕ್ಕುವ ಪ್ರಯತ್ನವಾಗಿದೆ. ದ್ವಿಭಾಷಾ ನೀತಿಯ ಅನ್ವಯ ಕಾಸರಗೋಡಿನಲ್ಲಿ ಕನ್ನಡಕ್ಕೂ ಸಮಾನ ಆದ್ಯತೆ ಸಿಗಬೇಕು. ಸರ್ಕಾರಿ ದಾಖಲೆಗಳು ಮತ್ತು ಪ್ರಕಟಣೆಗಳು ಕನ್ನಡದಲ್ಲೂ ಲಭ್ಯವಿರಬೇಕು ಎಂದು ಆಗ್ರಹಿಸಿದರು. 

ಕನ್ನಡ ಶಾಲೆಗಳಿಗೆ ಕೂಡಲೇ ಪೂರ್ಣ ಪ್ರಮಾಣದ ಕನ್ನಡ ಶಿಕ್ಷಕರನ್ನು ನೇಮಿಸಬೇಕು, ಶಿಕ್ಷಣ ಮತ್ತು ಆಡಳಿತದಲ್ಲಿ ಕನ್ನಡದ ಮೇಲಿನ ಮಲಯಾಳಂ ಹೇರಿಕೆಯನ್ನು ತಕ್ಷಣ ನಿಲ್ಲಿಸಬೇಕು, ಗಡಿನಾಡ ಕನ್ನಡಿಗರ ಶೈಕ್ಷಣಿಕ ಹಿತಾಸಕ್ತಿಯನ್ನು ಕಾಪಾಡಲು ಸರ್ಕಾರ ವಿಶೇಷ ಕ್ರಮ ಕೈಗೊಳ್ಳಬೇಕು,  ಸರ್ಕಾರವು ಈ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸದಿದ್ದರೆ, ಮುಂಬರುವ ದಿನಗಳಲ್ಲಿ ಅಭಿಯಾನದ ವತಿಯಿಂದ ರಾಜ್ಯಾದ್ಯಂತ ತೀವ್ರ ಸ್ವರೂಪದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. 

ಸುದ್ದಿಗೋಷ್ಠಿಯಲ್ಲಿ ಅಭಿಯಾನದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ರಾಜಶೇಖರ್ ಶೆಟ್ಟಿ, ರಾಜ್ಯ ಸಮಿತಿ ಸದಸ್ಯರಾದ ದಿವಾಕರ್ ಆಚಾರ್ಯ, ಉಮ್ಮರ್ ಫಾರೂಕ್ ಟೆಕ್ನಿಕ್ ಹಾಗೂ ಪ್ರಧಾನ ಕಾರ್ಯದರ್ಶಿ ನೌಫಲ್ ಕೆ. ಬಿ. ಎಸ್ ಉಪಸ್ಥಿತರಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries