ಬದಿಯಡ್ಕ: ಬದಿಯಡ್ಕ ಚಿನ್ಮಯ ವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಪ್ರಯುಕ್ತ ಸುದೀರ್ಘ ಓಟ ಬದಿಯಡ್ಕ ಪೇಟೆಯಿಂದ ಪ್ರಾರಂಭಿಸಿ ಶಾಲಾ ಆವರಣದವರೆಗೆ ನಡೆಸಲಾಯಿತು. ಬದಿಯಡ್ಕ ಪೋಲೀಸ್ ಠಾಣೆಯ ಹಿರಿಯ ಸೇವಾ ಪೋಲೀಸ್ ಅಧಿಕಾರಿ ಶಶಿಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಚಾಲನೆ ನೀಡಿದರು. ಶಾಲಾ ಮುಖ್ಯೋಪಾಧ್ಯಾಯನಿ ಮಾನಸ ಶುಭಹಾರೈಸಿದರು. ವಿದ್ಯಾರ್ಥಿಗಳು, ಅಧ್ಯಾಪಕ ವೃಂದದವರು ಓಟದಲ್ಲಿ ಪಾಲ್ಗೊಂಡಿದ್ದರು.

.jpg)
