ಪೆರ್ಲ: ಪೆರ್ಲದ ನಾಲಂದ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ 77ನೇ ಗಣರಾಜ್ಯೋತ್ಸವವನ್ನು ದೇಶಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಮಹಾವಿದ್ಯಾಲಯದ ಆವರಣದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ನಾಲಂದ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ರಾಂಶುಪಾಲ ಶಂಕರ ಖಂಡಿಗೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಧ್ವಜಾರೋಹಣ ನೆರವೇರಿಸಿದ ನಂತರ ಮಾತನಾಡಿದ ಅವರು, ಗಣರಾಜ್ಯೋತ್ಸವದ ಮಹತ್ವವನ್ನು ವಿವರಿಸಿ, ಸಂವಿಧಾನಾತ್ಮಕ ಮೌಲ್ಯಗಳು, ಶಿಸ್ತು, ಏಕತೆ ಹಾಗೂ ಜವಾಬ್ದಾರಿಯುತ ನಾಗರಿಕತ್ವವನ್ನು ಯುವಜನತೆ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದು, ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಘನತೆ ತುಂಬಿದರು. ಈ ಸಂದರ್ಭದಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಲು ಪ್ರತಿಜ್ಞೆ ಸ್ವೀಕರಿಸಲಾಯಿತು. ದೇಶಭಕ್ತಿಯ ಘೋಷಣೆಗಳೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

.jpg)
.jpg)
