ಸಮರಸ ಚಿತ್ರಸುದ್ದಿ: ಬದಿಯಡ್ಕ: ನೀರ್ಚಾಲು ಶ್ರೀ ಕುಮಾರಸ್ವಾಮಿ ಭಜನಾ ಮಂದಿರದ ಪುನಃ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆಯನ್ನು ನಿನ್ನೆ ಕುಮಾರಮಂಗಲ ಶ್ರೀಸುಬ್ರಮಣ್ಯ ಸ್ವಾಮಿ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಲಾಯಿತು. ಬ್ರಹ್ಮ ಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಬಿಡುಗಡೆಗೊಳಿಸಿ ಶುಭಹಾರೈಸಿದರು. ಮಂದಿರದ ಪದಾಧಿಕಾರಿಗಳು ಉಪಸ್ಥಿತರಿದ್ದರು.


