ವಾರಾಣಸಿ: ಗೋರಖ್‌ಪುರದಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೊ ಏರ್‌ಲೈನ್ಸ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದರಿಂದ ಇಲ್ಲಿನ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು.
'ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ವಿಮಾನ ಭೂಸ್ಪರ್ಶವಾದ ಬಳಿಕ ಎಲ್ಲ 216 ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.
ಅವರು ಗಮ್ಯಸ್ಥಾನ ತಲುಪಲು ಎಲ್ಲ ವ್ಯವಸ್ಥೆ ಮಾಡಲಾಗಿದೆ. ಹಕ್ಕಿ ಡಿಕ್ಕಿಯಿಂದ ವಿಮಾನದ ಮುಂಭಾಗಕ್ಕೆ ಹಾನಿಯಾಗಿದೆ' ಎಂದು ವಿಮಾನ ನಿಲ್ದಾಣದ ನಿರ್ದೇಶಕ ಪುನೀತ್ ಗುಪ್ತಾ ತಿಳಿಸಿದ್ದಾರೆ.

