ಬದಿಯಡ್ಕ: ಕಾಸರಗೋಡು ಜೋಗಿ ಸಮಾಜ ಸುಧಾರಕ ಸಂಘದ ವಾರ್ಷಿಕೋತ್ಸವವು ಜ.11 ರಂದು ಭಾನುವಾರ(ಇಂದು) ಬದಿಯಡ್ಕ ಶ್ರೀ ಗಣೇಶ ಮಂದಿರದಲ್ಲಿ ಜರಗಲಿರುವುದು. ಬೆಳಗ್ಗೆ 6.30ಕ್ಕೆ ಗಣಪತಿ ಹೋಮ, ಭಜನೆ, 8ಕ್ಕೆ ಮಂಗಳೂರು ಕದ್ರಿ ಮಠದ ಪ್ರಧಾನ ಅರ್ಚಕ ಉಮೇಶ್‍ನಾಥ್ ನಡೆಸಿಕೊಡುವ ರೋಟ್ ಪೂಜೆ ಆರಂಭ, 9.30 ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಕಾಸರಗೋಡು ಜೋಗಿ ಸಮಾಜ ಸುಧಾರಕ ಸಂಘದ ಅಧ್ಯಕ್ಷ ಗೋಪಾಲ ಕೆ.ಮಂಜೇಶ್ವರ ಅಧ್ಯಕ್ಷತೆ ವಹಿಸಲಿರುವರು. ಮಾಜಿ ಅಧ್ಯಕ್ಷ ಐತ್ತಪ್ಪ ಜೋಗಿ ಮವ್ವಾರು ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವಹಿಂದೂಪರಿಷತ್ ಅಧ್ಯಕ್ಷ ಎಚ್.ಕೆ.ಪುರುಷೋತ್ತಮ, ಕರ್ನಾಟಕ ಜೋಗಿ ಸಮಾಜ ಸುಧಾರಕ ಸಂಘ ಮಂಗಳೂರು ಇದರ ಅಧ್ಯಕ್ಷ ಕಿರಣ್ ಜೋಗಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿರುವರು. ಸಾಧಕರಿಗೆ ಸನ್ಮಾನ, ವಿಕಲಚೇತನರಿಗೆ ಧನಸಹಾಯ ವಿತರಣೆ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ರೋಟ್ ಪೂಜೆ, ಮಂಗಳಾರತಿ, ಪ್ರಸಾದ ವಿತರಣೆ, ಅನ್ನಪ್ರಸಾದ. ನಂತರ ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಲಿವೆ. 3.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಜೋಗಿ ಸಮಾಜ ಸುಧಾರಕ ಸಂಘ ಕಾಸರಗೋಡು ಇದರ ಕೋಶಾಧಿಕಾರಿ ರಮೇಶ್ ಕಳೇರಿ ಅಧ್ಯಕ್ಷತೆ ವಹಿಸಲಿರುವರು. ಪುತ್ತೂರು ಜೋಗಿ ಸಮಾಜ ಸುಧಾರಕ ಸಂಘದ ಅಧ್ಯಕ್ಷ ದಯಾನಂದ ಜೋಗಿ, ವಿಟ್ಲ ಜೋಗಿ ಸಮಾಜ ಸುಧಾರಕ ಸಂಘದ ಅಧ್ಯಕ್ಷ ರವಿಕುಮಾರ್ ಆರ್.ಎಸ್. ಅತಿಥಿಗಳಾಗಿ ಪಾಲ್ಗೊಳ್ಳುವರು.

