ಕಾಸರಗೊಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ಕಾಸರಗೋಡು ಪೆರಿಯ ಕ್ಯಾಂಪಸ್‍ನ ರಾಷ್ಟ್ರೀಯ ಸೇವಾ ಯೋಜನೆ(ಎನ್ನೆಸ್ಸೆಸ್)ಕೋಶ ಕೇರಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಿಶೇಷ ವಿಪತ್ತು ನಿವಾರಣಾ ತರಬೇತಿ ಕಾರ್ಯಕ್ರಮಕ್ಕೆ ಎಚಾಲನೆ ನೀಡಲಯಿತು.
ಏಳು ದಿವಸಗಳ ಕಾಳ ನಡೆಯಲಿರುವ ಶಿಬಿರವನ್ನು ಡೀನ್ ಅಕಾಡೆಮಿಕ್ ಪೆÇ್ರ. ಜೋಸೆಫ್ ಕೊಯಿಪಲ್ಲಿ ಉದ್ಘಾಟಿಸಿದರು. ಜಿಲ್ಲಾ ಸಂಯೋಜಕ ಡಾ. ಕೆ.ವಿ.ವಿನೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. "ಆಪತ್ ಮಿತ್ರ'ದ ಮಾಸ್ಟರ್ ತರಬೇತುದಾರ ರತೀಶ್ ಕಲ್ಲಿಯೋಟ್ ಉಪಸ್ಥೀತರಿದ್ದರು. ಎನ್ನೆಸ್ಸೆಸ್ ಕಾರ್ಯಕ್ರಮ ಸಂಯೋಜಕ ಡಾ. ಎಸ್. ಅನ್ಬಳಗಿ ಸ್ವಾಗತಿಸಿದರು.ಕಾರ್ಯಕ್ರಮ ಅಧಿಕಾರಿ ಡಾ.ಗುಜ್ಜೆಟ್ಟಿ ತಿರುಪತಿ ವಂದಿಸಿದರು.
ಜನವರಿ 17 ರಂದು ಮುಕ್ತಾಯಗೊಳ್ಳಲಿರುವ ಶಿಬಿರದಲ್ಲಿ ಜಿಲ್ಲೆಯ ವಿವಿಧ ಎನ್‍ಎಸ್‍ಎಸ್ ಕೋಶಗಳಿಂದ ಆಯ್ಕೆಯಾದ ಸುಮಾರು 150 ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ವಿಪತ್ತು ನಿರ್ವಹಣೆ ಮತ್ತು ರಕ್ಷಣಾ ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ತರಬೇತಿ ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಪತ್ತು ನಿರ್ವಹಣಾ ಸಾಧನಗಳನ್ನು ಬಳಸುವ ವಿಧಾನ, ತುರ್ತು ಸಂದರ್ಭಗಳಲ್ಲಿ ನೆರವು ನೀಡುವುದು ಮತ್ತು ನೈಸರ್ಗಿಕ ವಿಕೋಪಗಳು ಸೇರಿದಂತೆ ತುರ್ತು ಪರಿಸ್ಥಿತಿಗಳಿಗೆ ಯಾವ ರೀತಿ ಸಿದ್ಧತೆ ನಡೆಸಬೇಕು ಎಂಬ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುವುದು. ತರಬೇತಿ ಯಶಸ್ವಿಯಾಗಿ ಪೂರ್ತಿಗೊಳಿಸಿದವರಿಗೆ ಪ್ರಮಾಣಪತ್ರಗಳು ಮತ್ತು ತುರ್ತು ಪ್ರತಿಕ್ರಿಯೆ ಕಿಟ್‍ಗಳನ್ನು ನೀಡಲಾಗುವುದು.

