ಪೆರ್ಲ: ಪೆರ್ಲದ ವಿದ್ಯಾರಣ್ಯ ವಿದ್ಯಾವರ್ಧಕ ಸಂಘದ ಅಧೀನದಲ್ಲಿ ಚಟುವಟಿಕೆ ನಡೆಸುತ್ತಿರುವ ಶ್ರೀ ಸತ್ಯನಾರಾಯಣ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವ ಜ.8ರಂದು ಜರುಗಲಿದೆ. 8ರಂದು ಬೆಳಗ್ಗೆ 9ಕ್ಕೆ ಧ್ವಜಾರೋಹಣದೊಂದಿಗೆ ಸಾಂಸ್ಕøತಿಕ ಕಾರ್ಯಕ್ರಮ ಆರಂಭಗೊಳ್ಳುವುದು.11ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲ ಶಾಲಾ ಸಂಚಾಲಕ ಪಿ.ಎಸ್. ವಿಶ್ವಾಮಿತ್ರ ಅಧ್ಯಕ್ಷತೆ ವಹಿಸುವರು. ಎಣ್ಮಕಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕುಸುಮಾವತೀ ಸಮಾರಂಭ ಉದ್ಘಾಟಿಸುವರು.
ಘನಪಾಠಿ ಡಾ. ಪಳ್ಳತ್ತಡ್ಕ ಶಂಕರನಾರಾಯಣ ಭಟ್, ಎಣ್ಮಕಜೆ ಗ್ರಾಪಂ ಸದಸ್ಯೆ ಆಯಿಷಾ ಎ.ಎ, ವೊಕೇಶನಲ್ ಹೈಯರ್ ಸೆಕಂಡರಿ ಎಜುಕೇಶನ್ ಸಹಾಯಕ ನಿರ್ದೇಶಕಿ ಉದಯಕುಮಾರಿ ಇ.ಆರ್, ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜು ಪ್ರಾಂಶುಪಾಲ ಪ್ರೊ.ಮಹಮ್ಮದಾಲಿ, ಉಪಜಿಲ್ಲಾ ಶಿಕ್ಷಣಾಧಿಕಾರಿ ಶಶಿಧರ ಎಂ, ಮೊದಲಾದವರು ಅತಿಥಿಗಳಾಗಿ ಭಾಗವಹಿಸುವರು. ಈ ಸಂದರ್ಭ ಸೇವೆಯಿಂದ ನಿವೃತ್ತರಾಗಲಿರುವ ಶಾಲಾ ಶಿಕ್ಷಕರಿಗೆ ಗೌರವಾರ್ಪಣೆ, ನಂತರ ಸಾಂಸ್ಕøತಿಕ ಕಾರ್ಯಕ್ರಮಗಳು ಮುಂದುವರಿಯುವುದು.

