ಕಾಸರಗೋಡು: ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕøತಿಕ ಕ್ಷೇತ್ರದಲ್ಲಿ ಸೇವೆಗೈಯುತ್ತಿರುವ ಕಾಸರಗೋಡಿನ ಹಿರಿಯ ಸಂಘಟಕ ಡಾ. ಕೆ. ಎನ್ ವೆಂಕಟ್ರಮಣ ಹೊಳ್ಳ ದಂಪತಿಗೆ ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಭವನದ ಸಂಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್- ಸಂಧ್ಯಾರಾಣಿ ಟೀಚರ್ ಹಾಗೂ ಸ್ವರ್ಣಭೂಮಿ ಫೌಂಡೇಶನ್ ಕೋಲಾರ ಇದರ ರೂವಾರಿ ಶಿವಕುಮಾರ್ ಇವರು ಕೊಡಮಾಡುವ ಕೋಲಾರ-ಕಾಸರಗೋಡು ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಕರ್ನಾಟಕ ಸರ್ಕಾರದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ ಆರ್ ಸುಬ್ಬಯ್ಯಕಟ್ಟೆ, ಪ್ರಾಧ್ಯಾಪಕ ಡಾ. ಶರಣಪ್ಪ ಗಬ್ಬೂರು, ಕೊಡಗು ಕನ್ನಡ ಭವನದ ಅಧ್ಯಕ್ಷ ಬೊಳ್ಳಜಿರ ಬಿ ಅಯ್ಯಪ್ಪ, ಸಾಹಿತಿ ರುಬೀನಾ ಎಂ. ಎ, ಸಾಮಾಜಿಕ ಮುಖಂಡರಾದ ಗೋಪಾಲ ಶೆಟ್ಟಿ ಅರಿಬೈಲು, ಶ್ರೀಧರ ಶೆಟ್ಟಿ ಮುಟ್ಟಂ, ಕಾಸರಗೋಡು ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಪ್ರೊ.ಎ. ಶ್ರೀನಾಥ್ ಕಾಸರಗೋಡು, ರಾಜೇಶ್ ಕೋಟೆಕಣಿ ಮೊದಲಾದವರು ಉಪಸ್ಥಿತರಿದ್ದರು.


