ಮಂಜೇಶ್ವರ : ಕಾಸರಗೋಡು ಜಿಲ್ಲಾ ಕಾರ್ಯನಿರತ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಮಹಾಸಭೆ ಬಳ್ಳಪದವು ವೀಣಾವಾದಿನಿ ಸಂಗೀತ ಪೀಠದ ಸಭಾ ಭವನದಲ್ಲಿ ಸಂಘಟನೆಯ ಅಧ್ಯಕ್ಷ ರವಿ ನಾಯ್ಕಪ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು.
ಈ ಸಂದರ್ಭ ವೇದಿಕೆಯಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಆಯ್ಕೆಯಾದ ಪತ್ರಕರ್ತರ ಕುಟುಂಬ ಸದಸ್ಯರಾದ ಅಶ್ವಥಿ ಅಶೋಕ್ ನೀರ್ಚಾಲು, ವಿದ್ಯಾಕುಮಾರಿ ಬಜಕ್ಕೂಡ್ಲು, ಪ್ರಿಯಾಂಕ ಗಂಗಾಧರ ಕುಂಬ್ಡಾಜೆ, ಶ್ಯಾಂ ಪ್ರಸಾದ್ ಸರಳಿ, ಫಾತಿಮತ್ ಸುನೀನಾ ಕಯ್ಯಾರ್ ಹಾಗೂ ರಾಮಪ್ಪ ಮಂಜೇಶ್ವರ ಅವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ. ಆರ್ ಸುಬ್ಬಯ್ಯಕಟ್ಟೆ, ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಂಗಾಧರ ತೆಕ್ಕೆಮೂಲೆ, ಶ್ರೀಕಾಂತ್ ನೆಟ್ಟಣಿಗೆ, ಕವಿ, ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಮೊದಲಾದವರು ಉಪಸ್ಥಿತರಿದ್ದರು. ರವಿ ನಾಯ್ಕಾಪು ಸ್ವಾಗತಿಸಿ, ಶ್ರೀಕಾಂತ್ ನೆಟ್ಟಣಿಗೆ ವಂದಿಸಿದರು.



