ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಶುಕ್ರವಾರ ಗುಂಡಿಕ್ಕಿ ಹತ್ಯೆಗೈದಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದವು.
ಮೃತನನ್ನು ಜೈಶ್-ಎ-ಮೊಹಮ್ಮದ್ ಸಂಘಟನೆಯ ಕಮಾಂಡರ್ ಉಸ್ಮಾನ್ ಎಂದು ಗುರುತಿಸಲಾಗಿದ್ದು, ಆತನಿಂದ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

