HEALTH TIPS

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಏಮ್ಸ್‌ಗೆ ದಾಖಲು

ನವದೆಹಲಿ: ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಕಾರಣ ಅವರನ್ನು ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ(ಎಐಐಎಂಎಸ್‌) ಸೋಮವಾರ ದಾಖಲಿಸಲಾಗಿದೆ. '74 ವರ್ಷದ ಧನಕರ್ ಅವರು ಜನವರಿ 10ರಂದು ಎರಡು ಬಾರಿ ಪ್ರಜ್ಞೆ ತಪ್ಪಿದ್ದರು.

ವೈದ್ಯಕೀಯ ಪರೀಕ್ಷೆಗಾಗಿ ಅವರನ್ನು ಸೋಮವಾರ ಆಸ್ಪತ್ರೆಗೆ ಕರೆತರಲಾಗಿತ್ತು. ವೈದ್ಯರ ಸೂಚನೆಯಂತೆ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ವರ್ಷ ಜುಲೈ 21ರಂದು ಆರೋಗ್ಯ ಕಾರಣ ನೀಡಿ ಧನಕರ್ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದು ರಾಜಕೀಯ ವಲಯದಲ್ಲಿ ವಿವಾದ ಹಾಗೂ ಚರ್ಚೆಗೆ ಗ್ರಾಸವಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries