ಬದಿಯಡ್ಕ: ಕುಂಬ್ಡಾಜೆ ಗ್ರಾಮ ಪಂಚಾಯತಿ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿ ಮತ್ತೆ ಡಾ. ಶಿಹಾಬ್ ತಂಙಳ್ ನೇಮಕಗೊಂಡಿದ್ದಾರೆ.
ಆರೋಗ್ಯ ಕೇಂದ್ರಕ್ಕೆ ಆಗಮಿಸಿದ ಅವರನ್ನು ಕುಂಬ್ಡಾಜೆ ಪಂಚಾಯಿತಿ ಆಡಳಿತ ಸಮಿತಿ ಹಾಗೂ ಬಿಜೆಪಿ ಸಮಿತಿ ನೇತೃತ್ವದಲ್ಲಿ ಸ್ವಾಗತ ನೀಡಲಾಯಿತು.
ಈ ಹಿಂದೆ ಕುಂಬ್ಡಾಜೆಯ ಆರೋಗ್ಯ ಕೇಂದ್ರದಲ್ಲಿ ಕೆಲವು ವರ್ಷಗಳ ಕಾಲ ವೈದ್ಯಾಧಿಕಾರಿಯಾಗಿದ್ದು ಉತ್ತಮ ಸೇವೆಯನ್ನು ನೀಡಿ ಜನಸಾಮಾನ್ಯರ ಪ್ರೀತಿಗೆ ಪಾತ್ರರಾಗಿದ್ದರು. ಇವರನ್ನು ಪುನ: ಇಲ್ಲಿಗೆ ಕರೆಸುವಲ್ಲಿ ಬಿಜೆಪಿ ವಿನಂತಿಸಿತ್ತು.
ಕುಂಬ್ಡಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋದಾ ಎನ್, ಉಪಾಧ್ಯಕ್ಷ ರವೀಂದ್ರ ರೈ ಗೋಸಾಡ, ಕಾರಡ್ಕ ಬ್ಲಾಕ್ ಪಂಚಾಯಿತಿ ಸದಸ್ಯರಾದ ಸುಧಾಮ ಗೋಸಾಡ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ಬಿಜೆಪಿ ಪಂಚಾಯತಿ ಅಧ್ಯಕ್ಷ ಶಶಿಧರ ತೆಕ್ಕೆಮೂಲೆ, ಪ್ರಧಾನ ಕಾರ್ಯದರ್ಶಿ ಪ್ರಮೋದ್ ಭಂಡಾರಿ ಮುಂತಾದವರು ಉಪಸ್ಥಿತರಿದ್ದರು.


