ಕುಂಬಳೆ: ಆರಿಕ್ಕಾಡಿಯಲ್ಲಿ ಟೋಲ್ ಪ್ಲಾಜಾದಲ್ಲಿ ದಾಂಧಲೆ ನಡೆಸಿ ಹಾನಿಯೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೊಡ್ಯಮೆ ನಿವಾಸಿ ಫೈಸಲ್ ಅಬ್ದುಲ್‍ರಹಮಾನ್ ಹಾಗೂ ವಾಮಂಜೂರು ಚೆಕ್‍ಪೋಸ್ಟ್ ಸನಿಹದ ನಿವಾಸಿ ಅಬ್ದುಲ್ ನಾಸರ್ ಟಿ ಬಂಧಿತರು. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನೀಡಿದ ದೂರಿನನ್ವಯ ಈ ಬಂಧನ ನಡೆದಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ದಾಂಧಲೆ ನಡೆಸುವ ಸಂದರ್ಭ ಸಿಸಿ ಕ್ಯಾಮರಾದಲ್ಲಿ ದಾಖಲಾಗಿರುವ ಮಾಹಿತಿ ಆಧರಿಸಿ ಆರೋಪಿಗಳನ್ನು ಸೆರೆಹಿಡಿಯಲಾಗುತ್ತಿದೆ. ಉಳಿದ ಅರೋಪಿಗಳನ್ನೂ ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

