ಕಾಸರಗೋಡು: ಶೇಷವನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ತೆಂಕು ಗೋಪುರದ ನಿರ್ಮಾಣ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 3ಲಕ್ಷದ ಡಿಡಿಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಯೋಜನಾಧಿಕಾರಿ ದಿನೇಶ್ ಬಿ. ಅವರು ಕ್ಷೇತ್ರ ಸಮಿತಿಯ ಅಧ್ಯಕ್ಷ ವೇಣುಗೋಪಾಲ್ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭ ಕಾಸರಗೋಡು ವಲಯದ ಮೇಲ್ವಿಚಾರಕ ಗೋಪಾಲಕೃಷ್ಣ, ಭಜನಾ ಪರಿಷತ್ ಗೌರವಾಧ್ಯಕ್ಷ ಹರಿದಾಸ ಜಯಾನಂದ ಹೊಸದುರ್ಗ, ಕಾಸರಗೋಡು ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಡಾ.ಕೆ ಎನ್ ವೆಂಕಟ್ರಮಣ ಹೊಳ್ಳ, ಕೇಂದ್ರ ಒಕ್ಕೂಟ ಅಧ್ಯಕ್ಷ ಜ್ಞಾನೇಶ್ ಆಚಾರ್ಯ, ಸೇವಾಪ್ರತಿನಿಧಿ ಜ್ಯೋತಿ, ಕ್ಷೇತ್ರ ಸಮಿತಿ ಕಾರ್ಯದರ್ಶಿ ಗೋಪಾಲ್, ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ, ಸದಸ್ಯರಾದ ರಾಮಕೃಷ್ಣ ಮಯ್ಯ, ರಮೇಶ್ ಕೆ, ಶರತ್, ರಮೇಶ್ ರೈ, ಸುರೇಶ, ರವಿ, ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಜಯಲಕ್ಷ್ಮಿ, ಆಶಾ, ಉಮಾವತಿ, ಅನುರಾಧ, ಮೀರಾ ಉಪಸ್ಥಿತರಿದ್ದರು.


