ಅಡಗುತಾಣದಲ್ಲಿದ್ದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.
ಜಿಲ್ಲೆಯ ಶೀರಿ ಪ್ರದೇಶದಲ್ಲಿರುವ ಅರಣ್ಯದಲ್ಲಿ ಶನಿವಾರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಅಡಗುತಾಣ ಪತ್ತೆಯಾಯಿತು. ಎರಡು ಹ್ಯಾಂಡ್ ಗ್ರೆನೇಡ್‌ಗಳು, ಎಕೆ-47 ರೈಫಲ್‌ನ 24 ಗುಂಡುಗಳು, ವೈರ್‌ಲೆಸ್ ಆಯಂಟೆನಾ ಹಾಗೂ ಒಂದು ಕೊಡಲಿ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

