HEALTH TIPS

ಪೆರ್ಲ ನಾಲಂದ ಕಲಾ ಮತ್ತು ವಿಜ್ಞಾನ ಕಾಲೇಜಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಪೆರ್ಲ: ಪೆರ್ಲದ ನಾಲಂದ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ನಾಲಂದ ಚಾರಿಟೇಬಲ್ ಟ್ರಸ್ಟ್, ಐ ಕ್ಯೂ ಎ ಸಿ, ಎನ್.ಎಸ್.ಎಸ್ ಘಟಕದ ಸಹಯೋಗದಲ್ಲಿ ವಿದ್ಯಾರ್ಥಿಗಳ ಭವಿಷ್ಯದ ವೃತ್ತಿ ಆಯ್ಕೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ 'ವೃತ್ತಿ ಮಾರ್ಗದರ್ಶನ' ವಿಷಯದ ಕುರಿತಂತೆ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಗೋರಖಪುರದ ಭಾರತೀಯ ವಾಯು ಸೇನೆಯ ಆಸ್ಪತ್ರೆಯ ಸ್ಕ್ವಾಡ್ರನ್ ಲೀಡರ್, ಗ್ರೇಡೆಡ್ ಸ್ಪೆಷಲಿಸ್ಟ್, ಯಶಸ್ ಸೈಪಂಗಲ್ಲು ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸಮಗ್ರ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಅವರು ವಿದ್ಯಾರ್ಥಿಗಳು ತಮ್ಮ ಆಸಕ್ತಿ, ಸಾಮಥ್ರ್ಯ ಮತ್ತು ಕೌಶಲ್ಯಗಳನ್ನು ಗುರುತಿಸಿಕೊಂಡು ಸೂಕ್ತ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಅಗತ್ಯತೆಯನ್ನು ವಿವರಿಸಿದರು. ಪದವಿ ನಂತರ ಲಭ್ಯವಿರುವ ವಿವಿಧ ವೃತ್ತಿ ಅವಕಾಶಗಳು, ಉನ್ನತ ಶಿಕ್ಷಣದ ಆಯ್ಕೆಗಳು, ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಇತ್ತೀಚಿನ ದಿನಗಳಲ್ಲಿ ಬೆಳೆಯುತ್ತಿರುವ ಹೊಸ ಕ್ಷೇತ್ರಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು.

ಯಶಸ್ ಸೈಪಂಗಲ್ಲು ಅವರು ವಿದ್ಯಾರ್ಥಿಗಳಿಗೆ ಗುರಿ ನಿಗದಿಪಡಿಸಿ ಶಿಸ್ತಿನಿಂದ ನಿರಂತರ ಪರಿಶ್ರಮ ವಹಿಸಿದರೆ ಯಶಸ್ಸು ಸಾಧಿಸಬಹುದು ಎಂದು ಪ್ರೇರಣಾತ್ಮಕವಾಗಿ ಹೇಳಿದರು. ಕಾರ್ಯಕ್ರಮದ ಅಂತ್ಯದಲ್ಲಿ ನಡೆದ ಸಂವಾದದಲ್ಲಿ ವಿದ್ಯಾರ್ಥಿಗಳು ತಮ್ಮ ವೃತ್ತಿ ಸಂಬಂಧಿತ ಸಂಶಯಗಳನ್ನು ಕೇಳಿ ಸ್ಪಷ್ಟನೆ ಪಡೆದುಕೊಂಡರು. ಈ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿದ್ದು, ತಮ್ಮ ಭವಿಷ್ಯದ ವೃತ್ತಿ ಯೋಜನೆಗೆ ಸ್ಪಷ್ಟ ದಿಕ್ಕು ನೀಡಿದಂತಾಯಿತು. ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಉಪನ್ಯಾಸಕಿ  ಶ್ರೀಮತಿ ನಯನಾ ನಿರೂಪಿಸಿ ಸ್ವಾಗತಿಸಿದರು. ವಿದ್ಯಾರ್ಥಿನಿ ಅನಘಾ ವಂದಿಸಿದರು. ಮಲಯಾಳ ವಿಭಾಗದ ಉಪನ್ಯಾಸಕಿ ಶ್ರೀಮತಿ ವಿನಿಷಾ, ಎನ್.ಎಸ್.ಎಸ್ ಯೋಜನಾಧಿಕಾರಿ ವರ್ಷಿತ್ ಕೆ ಉಪಸ್ಥಿತರಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries