ಪೆರ್ಲ: ಬಾಳೆಮೂಲೆ ವೀರಕೇಸರಿ ಫ್ರೆಂಡ್ಸ್ ಕ್ಲಬ್ (ರಿ) ಮತ್ತು ಕುಞÂಮಲೆ ದರ್ಭೆ ಶ್ರೀ ಸಿದ್ದಿವಿನಾಯಕ ಭಜನಾ ಸೇವಾ ಟ್ರಸ್ಟ್(ರಿ),ಸಹಬಾಗಿತ್ವದಲ್ಲಿ ರಕ್ತದಾನ ಶಿಬಿರ ಬಾಳೆಮೂಲೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.
ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯ ಸೋಮಶೇಖರ್ ಜೆ ಸ್ ಶಿಬಿರ ಉದ್ಘಾಟಿಸಿದರು. ಜಿ ಲ್ ಪಿ ಶಾಲಾ ಮುಖ್ಯ ಶಿಕ್ಷಕ ರಾಜೇಶ್ ಅದ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ಬ್ಲಾಕ್ ಪಂಚಾಯಿತಿ ಸದಸ್ಯೆ ವಿದ್ಯಾ ಕುಮಾರಿ, ಉಕ್ಕಿನಡ್ಕಾಸ್ ಆಯುರ್ವೇದ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸ್ವಪ್ನಾಜಯಗೋವಿಂದ, ಪುತ್ತೂರು ರೋಟರಿ ಕ್ಯಾಂಪೆÇ್ಕೀ ಬ್ಲಡ್ ಸೆಂಟರ್‍ನ ವೈದ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಬಾಳೆಮೂಲೆ ವೀರಕೇಸರಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ರವಿನಾಯ್ಕ್ ಬಾಳೆಮೂಲೆ ಸ್ವಾಗತಿಸಿದರು. ರಮೇಶ್ ಬಳ್ಳಕಾರ್ಯಕ್ರಮ ನಿರೂಪಿಸಿದರು. ಶ್ರೀ ಸಿದ್ಧಿ ವಿನಾಯಕ ಭಜನಾ ಸೇವಾ ಟ್ರಸ್ಟ್ ಅಧ್ಯಕ್ಷ ಕೃಷ್ಣ ನಾಯ್ಕ್ ಬಳ್ಳ ವಂದಿಸಿದರು. ರಕ್ತದಾನ ಶಿಬಿರದಲ್ಲಿ 35 ಮಂದಿ ದಾನಿಗಳು ರಕ್ತದಾನ ಮಾಡಿದರು.


