ಕಾಸರಗೋಡು: ಕವಿ ಹಾಗೂ ವ್ಯಂಗ್ಯ ಚಿತ್ರಕಾರರಾದ ವೆಂಕಟ ಭಟ್ ಎಡನೀರು ಅವರಿಗೆ 2026ನೇ ಸಾಲಿನ ಸಾಹಿತ್ಯರತ್ನ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಸೋಶಿಯಲ್ ವರ್ಕರ್ಸ್ ಅಸೋಸಿಯೇಷನ್ ಕನ್ನಡ ವಾರ್ತಾ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು,ಕರ್ನಾಟಕ ಸಾಧಕರ ಅಭಿವೃದ್ಧಿ ಮಂಡಳಿ ಟ್ರಸ್ಟ್ ಸಹಯೋಗದೊಂದಿಗೆ ಕನ್ನಡ ಸಾಹಿತ್ಯ ಮತ್ತು ಚಿತ್ರಕಲಾ ಕ್ಷೇತ್ರಕ್ಕೆ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ಈ ಆಯ್ಕೆ ಂಆಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.


