ಕುಂಬಳೆ: ಬ್ಯಾಂಕ್ ಆಫ್ ಬರೋಡ ನೇತೃತ್ವದ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ವನಿತಾ ಮಹಿಳಾ ಸಮಾಜ ನಾೈಕಾಪು ಇದರ ಜಂಟಿ ಆಶ್ರಯದಲ್ಲಿ ಮೂರು ತಿಂಗಳ ಉಚಿತ ಹೊಲಿಗೆ ತರಬೇತಿಯನ್ನು ನಾಯ್ಕಾಪು ಮಹಿಳಾ ಸಮಾಜದಲ್ಲಿ ಉದ್ಘಾಟಿಸಲಾಯಿತು.
ಮಂಗಳೂರು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೋತಿ ರಾಜ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೇವಲ ತರಬೇತಿ ಪಡೆಯುವುದು ಮುಖ್ಯವಲ್ಲ ತರಬೇತಿ ನಂತರ ಅದನ್ನು ಮುಂದುವರಿಸಿಕೊಂಡು ಹೋಗುವುದು ಅಗತ್ಯ, ತರಬೇತಿ ನಂತರ ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು ಬ್ಯಾಂಕ್ ಮೂಲಕ ಲಭಿಸುವ ಸಾಲ ಸೌಲಭ್ಯಗಳ ಬಗ್ಗೆ ತಿಳಿಸಿ ಮಹಿಳೆಯರು ಇದರ ಪ್ರಯೋಜನ ಪಡೆಯಲು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಯ್ಕಾಪು ವನಿತಾ ಮಹಿಳಾ ಸಮಾಜದ ಅಧ್ಯಕ್ಷೆ ವಿಜಯಲಕ್ಷೀ ವಹಿಸಿ ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರಿಗೆ ಶುಭ ಹಾರೈಸಿದರು. ಭಾರತೀಯ ವಿಕಾಸ ಟ್ರಸ್ಟ್ ನ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ಮಾತನಾಡಿ ಸ್ವ-ಉದ್ಯೋಗದ ನಿಯಮಗಳು, ಹಾಗೂ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಸಂಸ್ಥೆಗಳ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಟೈಲರಿಂಗ್ ತರಬೇತುದಾರೆ ವಿಜಯ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚೇತಕುಮಾರಿ ಸ್ವಾಗತಿಸಿ, ಅಶೋಕ್ ಕುಮಾರ್ ವಂದಿಸಿದರು. ಸಾತ್ವಿಕಾಶ್ರೀ ಕಾರ್ಯಕ್ರಮ ನಿರೂಪಿಸಿದರು.

.jpg)
.jpg)
