HEALTH TIPS

ಚೆನ್ನೈ: ವಿಮಾನ ನಿಲ್ದಾಣದಲ್ಲಿ ಲಘು ಬೆಂಕಿ ಅವಘಡ

ಚೆನ್ನೈ: ನಗರದ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಲಘು ಬೆಂಕಿ ಅವಘಡ ಸಂಭವಿಸಿದ್ದು, ಯಾವುದೇ ಹಾನಿ ಉಂಟಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಘಟನೆಯಿಂದಾಗಿ ವಿಮಾನ ಸಂಚಾರಕ್ಕೂ ಯಾವುದೇ ತೊಂದರೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ವಿಮಾನಯಾನ ಕಚೇರಿಗಳ ಸಮೀಪದ ಟರ್ಮಿನಲ್ 2ರ ನಿರ್ಗಮನ ಪ್ರದೇಶದಲ್ಲಿ ಬೆಳಿಗ್ಗೆ 11.45ರ ಸುಮಾರಿಗೆ ಸಣ್ಣ ಬೆಂಕಿ ಅವಘಡ ಸಂಭವಿಸಿದೆ.

ಆ ಜಾಗದಲ್ಲಿ ದಾಖಲೆಗಳನ್ನು ಸಂಗ್ರಹಿಸಿಡಲಾಗಿತ್ತು. ವಿಪತ್ತು ನಿರ್ವಹಣಾ ಸಮಿತಿಯು ತಕ್ಷಣ ಕ್ರಮ ಕೈಗೊಂಡಿದ್ದು, 12.45ರ ಹೊತ್ತಿಗೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು' ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ(ಎಎಐ) ಅಧಿಕೃತ ಪ್ರಕಟಣೆ ತಿಳಿಸಿದೆ.

'ಎಎಐ ಮತ್ತು ರಾಜ್ಯ ಅಗ್ನಿಶಾಮಕ ದಳದವರು, ಸಿಐಎಸ್‌ಎಫ್ ಮತ್ತು ಪೊಲೀಸರು ತ್ವರಿತ ಕಾರ್ಯಾಚರಣೆ ಕೈಗೊಂಡಿದ್ದರಿಂದ ಯಾವುದೇ ಹಾನಿ ಇಲ್ಲದಂತೆ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ಮರಳಿಸಿದರು' ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries