ಬದಿಯಡ್ಕ: ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರಿಗೆ ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಶೀರ್ವಾದ ಪಡೆದುಕೊಳ್ಳಲಾಯಿತು.
ಸೇವಾ ಸಮಿತಿಯ ಅಧ್ಯಕ್ಷ ಜಯದೇವ ಖಂಡಿಗೆ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಜಗನ್ನಾಥ ರೈ ಪೆರಡಾಲಗುತ್ತು, ಆಡಳಿತ ಮಂಡಳಿ ಸದಸ್ಯ ಸೀತಾರಾಮ ನವಕಾನ, ಕೋಶಾಧಿಕಾರಿ ಸೂರ್ಯನಾರಾಯಣ ಬಿ, ಪದಾಧಿಕಾರಿಗಳಾದ ಶಿವರಾಮ ಭಟ್ ಪೆರ್ಮುಖ, ಡಾ. ವೈ.ವಿ. ಕೃಷ್ಣಮೂರ್ತಿ, ಸತ್ಯ ನಾರಾಯಣ ಶರ್ಮ ಪಂಜಿತ್ತಡ್ಕ ನಿಯೋಗದಲ್ಲಿದ್ದರು.

.jpg)
