ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಕ್ ಹಸೀನಾ ನೇತೃತ್ವದ ಅವಾಮಿ ಲೀಗ್‌ನ ಹಿಂದೂ ನಾಯಕರೊಬ್ಬರು ಪೊಲೀಸ್ ಕಸ್ಟಡಿಯಲ್ಲಿರುವಾಗಲೇ ಮೃತಪಟ್ಟಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಜೈಲು ಅಧಿಕಾರಿಗಳು ಅವರಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ನೀಡಿಲ್ಲ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.
ಅವಾಮಿ ಲೀಗ್‌ನ ಜಿಲ್ಲಾ ಘಟಕದ ಸಾಂಸ್ಕೃತಿಕ ಕಾರ್ಯದರ್ಶಿಯಾಗಿದ್ದ ಗಾಯಕ ಪ್ರೊಲೊಯ್ ಚಾಕಿ(60) ಅವರು ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟರು ಎಂದು ಬಾಂಗ್ಲಾದೇಶದ ಮಾಧ್ಯಮ ವರದಿ ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.
2024ರ ವಿದ್ಯಾರ್ಥಿ ಪ್ರತಿಭಟನೆ ವೇಳೆ ಸಂಭವಿಸಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಚಾಕಿ ಅವರನ್ನು ಕಸ್ಟಡಿಗೆ ಪಡೆಯಲಾಗಿತ್ತು. ಮಧುಮೇಹ, ಹೃದಯಸಂಬಂಧಿ ಕಾಯಿಲೆ ಸೇರಿದಂತೆ ತೀವ್ರ ಅನಾರೋಗ್ಯದಿಂದ ಚಾಕಿ ಬಳಲುತ್ತಿದ್ದರು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

